ಕರ್ನಾಟಕದಲ್ಲಿ `ಹಿಜಾಬ್’ ಗಲಾಟೆಗೆ ಕಾಂಗ್ರೆಸ್ ಪಕ್ಷವೇ ಕಾರಣ : ಸಚಿವ ಆರ್. ಅಶೋಕ್

Spread the love

ಬೆಂಗಳೂರು : ಕರ್ನಾಟಕದಲ್ಲಿ ಭಾರೀ ಸದ್ದು ಮಾಡುತ್ತಿರುವ ಹಿಜಾಬ್ ವಿವಾದಕ್ಕೆ ಕಾಂಗ್ರೆಸ್ ಪಕ್ಷವೇ ಕಾರಣ, ಹಿಜಾಬ್ ಗಲಾಟೆಗೆ ಕಾಂಗ್ರೆಸ್ ಪ್ರೇರಪಣೆ ನೀಡುತ್ತಿದೆ ಎಂದು ಕಂದಾಯ ಸಚಿವ ಅರ್. ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ,ಕರ್ನಾಟಕದಲ್ಲಿ ಹಿಜಾಬ್ ಗಲಾಟೆಗೆ ಕಾಂಗ್ರೆಸ್ ಕಾರಣ.

ಕಾಂಗ್ರೆಸ್ ಪಕ್ಷ ಒಂದು ವರ್ಗಕ್ಕೆ ಪ್ರೇರಪಣೆ ನೀಡುತ್ತಿದೆ. ಕಾಂಗ್ರೆಸ್ ನ ಇನ್ನೊಂದು ವರ್ಗ ಎರಡೂ ಕಡೆ ಇದೆ. ಕಾಂಗ್ರೆಸ್ ಪಕ್ಷ ಎರಡೂ ಕಡೆ ಇರುವುದು ಒಳ್ಳೆಯದಲ್ಲ. ಕಾಂಗ್ರೆಸ್ ಯಾರ ಪರ ಇದೆ ಎಂದು ಸ್ಪಷ್ಟನೆ ನೀಡಬೇಕು ಎಂದು ಹೇಳಿದ್ದಾರೆ.