
ಮುಂಡಗೋಡ : ತಹಶೀಲದಾರ ಶ್ರೀಧರ್ ಮಂದಲಮನಿ ಅವರು ಸುಳ್ಳು ಜಾತಿ ಸರ್ಟಿಫಿಕೇಟ್ ಪಡೆದುಕೊಂಡು ದಲಿತರ ಹಕ್ಕನ್ನು ಕಸಿದಿದ್ದಾರೆ. ಈ ಹಿನ್ನೆಲೆಯಲ್ಲಿ ದಿನಾಂಕ 12ರಂದು ಪ್ರವಾಸಿ ಮಂದಿರದಿಂದ ಮೆರವಣಿಗೆ ಹೊರಡಿಸಲಾಗುವುದು ಹಾಗೂ ರಸ್ತೆ ತಡೆ ನಡೆಸಲಾಗುವುದು. ನಂತರ ತಹಸೀಲ್ದಾರ್ ಕಚೇರಿಗೆ ಹೋಗಿ ಅಲ್ಲಿ ಧರಣಿ ಸತ್ಯಾಗ್ರಹ ಮಾಡಲಾಗುವುದು ಎಂದು ಕರ್ನಾಟಕ ದಲಿತ ರಕ್ಷಣಾ ವೇದಿಕೆಯ ರಾಜ್ಯ ಸಂಚಾಲಕರಾದ ಚಿದಾನಂದ ಹರಿಜನ ತಿಳಿಸಿದರು.
ಇಂದು ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡುತ್ತಾ ಈ ವಿಷಯ ತಿಳಿಸಿದರು. ಮುಂಡಗೋಡ್ ತಹಶೀಲದಾರ ಶ್ರೀಧರ್ ಮುಂದಲಮನಿ ಅವರನ್ನು ಕೂಡಲೇ ಅಮಾನತು ಮಾಡುವಂತೆ ಚಿದಾನಂದ ಹರಿಜನ ಆಗ್ರಹಿಸಿದರು.
ಈ ಸಂದರ್ಭದಲ್ಲಿ ಹುಬ್ಬಳ್ಳಿಯ ದಲಿತ ಮುಖಂಡರಾದ ವೆಂಕಟೇಶ ಮೇಸ್ತ್ರಿ ಮಾತನಾಡಿ, ಶ್ರೀಧರ್ ಮುಂದಲಮನಿ ಅವರು ಖೊಟ್ಟಿ ಜಾತಿ ಪ್ರಮಾಣಪತ್ರ ಪಡೆದು ಎಸ್ಸಿ, ಎಸ್ಟಿ ಸಮುದಾಯಕ್ಕೆ ಅನ್ಯಾಯ ಮಾಡಿದ್ದಾರೆ. ಅವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ವಾಲ್ಮೀಕಿ ಸಮಾಜದ ಮುಖಂಡರಾದ ಹುಬ್ಬಳ್ಳಿಯ
ಗುರುನಾಥ್ ಗಂಜಗೋಳ ಮಾತನಾಡಿ, ತಹಶೀಲ್ದಾರ್ ಶ್ರೀಧರ್ ಮುಂದಲಮನಿ ಅವರು ನಕಲಿ ಜಾತಿ ಪ್ರಮಾಣಪತ್ರ ಪಡೆದಿದ್ದು ಅವರನ್ನು ಅಮಾನತ್ ಮಾಡಬೇಕು ಎಂದು ಒತ್ತಾಯಿಸಿದರು.