
ಮುಂಡಗೋಡ : ತಾಲೂಕಿನ 5 ಅಂಗನವಾಡಿ ಸಹಾಯಕರ ಹುದ್ದೆಗೆ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಪ್ರಭಾರ ಸಿಡಿಪಿಒ ದೀಪಾ ಬಂಗೇರ ತಿಳಿಸಿದ್ದಾರೆ.
ತಾಲೂಕಿನಲ್ಲಿ ಅಂಗನವಾಡಿ ಸಹಾಯಕರ ಹುದ್ದೆ ಖಾಲಿ ಇದೆ. ಅಂದಲಗಿ, ಅತ್ತಿವೇರಿ ಗೌಳಿದಡ್ಡಿ, ಮುಂಡಗೋಡದ ಇಂದಿರಾನಗರ, ಜೇನಮುರಿಯ ಅಂಗನವಾಡಿ ಕೇಂದ್ರದಲ್ಲಿ ಅಂಗನವಾಡಿ ಸಹಾಯಕಿಯರ ಹುದ್ದೆ ಖಾಲಿ ಇದೆ.
ಅರ್ಜಿಗಳನ್ನು ಸ್ವೀಕರಿಸಲು ಆರಂಭಿಸಲಾಗಿದ್ದು ಆಸಕ್ತ ಮಹಿಳಾ ಅಭ್ಯರ್ಥಿಗಳು http://anganwadirecruit.nic.in ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿಗಳನ್ನು ಸಲ್ಲಿಸಲು ಮೇ 11 ಕೊನೆಯ ದಿನವಾಗಿದ್ದು ಹೆಚ್ಚಿನ ಮಾಹಿತಿಗಾಗಿ ಮುಂಡಗೋಡ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಲು ಅವರು ತಿಳಿಸಿದ್ದಾರೆ.