Headlines

SSLC Result: ನಾಳೆ SSLC ಫಲಿತಾಂಶ ಪ್ರಕಟ; ರಿಸಲ್ಟ್ ನೋಡಲು ಹೀಗೆ ಮಾಡಿ

Spread the love

ಬೆಂಗಳೂರು (ಮೇ 18): ನಾಳೆ SSLC ಫಲಿತಾಂಶ ಪ್ರಕಟವಾಗಲಿದೆ. ಪ್ರಾಥಮಿಕ ಹಾಗೂ ಪ್ರೌಢಶಾಲೆ ಸಚಿವ ಬಿ.ಸಿ ನಾಗೇಶ್​ ಅವರು ನಾಳೆ 12.30ಕ್ಕೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶವನ್ನು ಘೋಷಣೆ ಮಾಡಲಿದ್ದಾರೆ. SSLC ಬೋರ್ಡ್​ ಕೂಡ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟ ಮಾಡಲಿದೆ.ವಿದ್ಯಾರ್ಥಿಗಳಿಗೆ ಮಧ್ಯಾಹ್ನ 1 ಗಂಟೆಗೆ ವೆಬ್ ಸೈಟ್ ನಲ್ಲಿ ಫಲಿತಾಂಶ ಲಭ್ಯವಿರಲಿದೆ. ನೋಂದಣಿ ಮಾಡಿಕೊಂಡ ವಿದ್ಯಾರ್ಥಿಗಳ ನಂಬರ್ ಗೆ ಎಸ್‌ಎಂಎಸ್ ಮೂಲಕ ಫಲಿತಾಂಶ ಬರಲಿದೆ. ವಿದ್ಯಾರ್ಥಿಗಳು ಫಲಿತಾಂಶವನ್ನು https://sslc.karnataka.gov.in/ ಅಥವಾ https://karresults.nic.in/ ಗೆ ಭೇಟಿ ನೀಡಿ ಚೆಕ್‌ ಮಾಡಬಹುದಾಗಿದೆ.

ನಾಳೆ SSLC ಫಲಿತಾಂಶ ಪ್ರಕಟ

ಮೌಲ್ಯಮಾಪನ ನಿರೀಕ್ಷೆಗಿಂತ ತಡವಾಗಿ ಪೂರ್ಣಗೊಂಡಿದೆ. ಬಳಿಕ ಮೌಲ್ಯಮಾಪನದಲ್ಲಿ ಸಣ್ಣ ಪುಟ್ಟ ದೋಷಗಳು, ಕಣ್ತಪ್ಪುಗಳಿದ್ದಲ್ಲಿ ಅವುಗಳನ್ನು ಸರಿಪಡಿಸುವ ಕಾರ್ಯ ನಡೆಸಲಾಗುತ್ತಿದೆ. ಹೀಗಾಗಿ ಈ ಬಾರಿ SSLC ಫಲಿತಾಂಶ ಪ್ರಕಟನೆ ತಡವಾಗಿದೆ.
SSLC 10 ನೇ ಫಲಿತಾಂಶ 2022: ಪರಿಶೀಲಿಸಲು ಕ್ರಮಗಳು

ಹಂತ 1. ಅಧಿಕೃತ ವೆಬ್‌ಸೈಟ್ KB – sslc.karnataka.gov.in ಗೆ ಹೋಗಿ

ಹಂತ 2. ಮುಖಪುಟದಲ್ಲಿ SSLC 10 ನೇ ಪರೀಕ್ಷೆಯ ಫಲಿತಾಂಶ 2022 ಲಿಂಕ್ ಅನ್ನು ಕ್ಲಿಕ್ ಮಾಡಿ

ಹಂತ 3. ಲಾಗಿನ್ ID ನಮೂದಿಸಿ- ನೋಂದಣಿ ಸಂಖ್ಯೆ/ ರೋಲ್ ಸಂಖ್ಯೆ ಹಾಕಿ

ಹಂತ 4. ನಿಮ್ಮ SSLC ಫಲಿತಾಂಶ ಸ್ಕ್ರೀನ್​ ಮೇಲೆ ಕಾಣಿಸುತ್ತದೆ

ಹಂತ 5. ಡೌನ್‌ಲೋಡ್ ಮಾಡಿ ಮತ್ತು ಹೆಚ್ಚಿನ ಮಾಹಿತಿಗಾಗಿ ಪ್ರಿಂಟ್ ಔಟ್ ತೆಗೆದುಕೊಳ್ಳಿ

ಹೊರಬೀಳಲಿದೆ 8.73 ಲಕ್ಷ ವಿದ್ಯಾರ್ಥಿಗಳ ಫಲಿತಾಂಶ

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಏಪ್ರಿಲ್ 11 ರಂದು ಮುಕ್ತಾಯಗೊಂಡಿದ್ದು, ಈ ಬಾರಿ ರಾಜ್ಯದ ಒಟ್ಟು 15,387 ಶಾಲೆಗಳ 8.73 ಲಕ್ಷ ವಿದ್ಯಾರ್ಥಿಗಳು SSLC ಪರೀಕ್ಷೆ ಬರೆದಿದ್ದರು. ರಾಜ್ಯಾದ್ಯಂತ 3,446 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು. ಸುಮಾರು 234 ಕೇಂದ್ರಗಳಲ್ಲಿ ನಡೆದ ಮೌಲ್ಯಮಾಪನ ಪ್ರಕ್ರಿಯೆಯಲ್ಲಿ 63,796 ಶಿಕ್ಷಕರು ಭಾಗಿಯಾಗಿದ್ದಾರೆ. ನಾಳೆ SSLC ಫಲಿತಾಂಶ ಹೊರಬೀಳಲಿದೆ.

ಈ ಬಾರಿ ವಿದ್ಯಾರ್ಥಿಗಳಿಗೆ ಸಿಗಲಿದೆ ಗ್ರೇಸ್ ಮಾರ್ಕ್ಸ್​

SSLC ಪೇಲ್‌ ಕಡಿಮೆ ಮಾಡಲು 10% ಗ್ರೇಸ್ ಮಾರ್ಕ್ ನೀಡಲು ಶಿಕ್ಷಣ ಇಲಾಖೆ ಮುಂದಾಗಿದೆ. SSLC ಫಲಿತಾಂಶಕ್ಕಾಗಿ ಕಾಯುತ್ತಿರುವ ರಾಜ್ಯದ ವಿದ್ಯಾರ್ಥಿಗಳಿಗೆ ಸಂತಸದ ಸುದ್ದಿ. ಉತ್ತೀರ್ಣಕ್ಕೆ ಬೆರಳೆಣಿಕೆಯಷ್ಟು ಅಂಕಗಳ ಕೊರತೆ ಹೊಂದಿರುವವರಿಗೆ ಈ ಬಾರಿಯೂ ಗರಿಷ್ಠ 3 ವಿಷಯದಲ್ಲಿ ಶೇ.10ರಷ್ಟು ಗ್ರೇಸ್‌ ಅಂಕ ನೀಡಿ ಪಾಸ್‌ ಮಾಡಲು ಸರ್ಕಾರ ತೀರ್ಮಾನಿಸಿದೆ.

ಅನುತ್ತೀರ್ಣವಾಗಿರುವ ಯಾವುದಾದರೂ ಮೂರು ವಿಷಯಗಳ ಥಿಯರಿ ಪರೀಕ್ಷೆಯ ಒಟ್ಟು ಅಂಕಗಳಲ್ಲಿನ ಶೇ.10 ಗ್ರೇಸ್​ ಮಾರ್ಕ್ಸ್​ಗಳನ್ನು ಅಗತ್ಯವಾರು ಹಂಚಿಕೆ ಮಾಡಿದಾಗ ವಿದ್ಯಾರ್ಥಿ ಪಾಸಾಗುವುದಾದರೆ ಮಾತ್ರ ಇದರ ಉಪಯೋಗ ಸಿಗಲಿದೆ.

ಯಾರಿಗೆ ಸಿಗಲಿದೆ ಗ್ರೇಸ್ ಮಾರ್ಕ್ಸ್?

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅನುತ್ತೀರ್ಣವಾಗಿರುವ ಯಾವುದಾದರೂ ಮೂರು ವಿಷಯಗಳ ಥಿಯರಿ ಪರೀಕ್ಷೆಯ ಒಟ್ಟು ಅಂಕಗಳಲ್ಲಿನ ಶೇ.10 ಕೃಪಾಂಕಗಳನ್ನು ಅಗತ್ಯವಾರು ಹಂಚಿಕೆ ಮಾಡಿದಾಗ ವಿದ್ಯಾರ್ಥಿ ಪಾಸಾಗುವುದಾದರೆ ಮಾತ್ರ ಇದರ ಉಪಯೋಗ ಸಿಗಲಿದೆ. ಪರೀಕ್ಷೆ ಬರೆದಿರುವ ಆರು ವಿಷಯಗಳ ಪೈಕಿ ಮೂರು ವಿಷಯಗಳಲ್ಲಿ ಉತ್ತೀರ್ಣರಾಗಿದ್ದು, ಇನ್ನುಳಿದ ಮೂರು ವಿಷಯಗಳಲ್ಲಿ ಅನುತ್ತಿರ್ಣವಾಗಿದ್ದರೆ ಆ ಮೂರು ವಿಷಯಗಳಲ್ಲಿ ಥಿಯರಿ ಪರೀಕ್ಷೆಯ ತಲಾ 80 ಅಂಕದ ಶೇ.10ರಷ್ಟು ಅಂದರೆ ಮೂರು ವಿಷಯಗಳಿಂದ 24 ಅಂಕಗಳು ಗ್ರೇಸ್‌ ಅಂಕಗಳಾಗಿ ದೊರೆಯುತ್ತವೆ.

ಗ್ರೇಸ್ ಮಾರ್ಕ್ಸ್ ಹಂಚಿಕೆ ಮಾಡುವುದು ಹೇಗೆ?

ಕನ್ನಡ ಭಾಷಾ ವಿಷಯಕ್ಕೆ 100 ಅಂಕಗಳಿಗೆ ಥಿಯರಿ ಪರೀಕ್ಷೆ ಇರುವುದರಿಂದ ಶೇ.10 ಅಂದರೆ 10 ಅಂಕಗಳಾಗುತ್ತದೆ. ಹಾಗಾಗಿ ಅನುತ್ತೀರ್ಣ ವಿಷಯಗಳಲ್ಲಿ ಪ್ರಥಮ ಭಾಷೆ ಕನ್ನಡ ಇದ್ದಲ್ಲಿ ಮೂರು ವಿಷಯಗಳ ಕೃಪಾಂಕ ಸಂಖ್ಯೆ ಆಗ 26 ಆಗಲಿದೆ. ಈ ಅಂಕಗಳನ್ನು ಅನುತ್ತೀರ್ಣ ವಿಷಯಗಳಿಗೆ ಹಂಚಿಕೆ ಮಾಡಿ ಪಾಸು ಮಾಡಲಾಗುತ್ತದೆ. ಆದರೆ, ಈ ಗ್ರೇಸ್‌ ಅಂಕಗಳನ್ನುಯಾವ ರೀತಿ ಹಂಚಿಕೆ ಮಾಡಲಾಗುತ್ತದೆ ಎಂಬುದನ್ನು ಇನ್ನೂ ಬಹಿರಂಗಪಡಿಸಿಲ್ಲ.

**************************** **************************************************************************