ರಾಜ್ಯ ಸರ್ಕಾರದಿಂದ ‘ಆಡಳಿತ ಯಂತ್ರ’ಕ್ಕೆ ಮೇಜರ್ ಸರ್ಜರಿ: ’12 IAS ಅಧಿಕಾರಿ’ಗಳನ್ನು ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ 12 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರವು ಅಧಿಸೂಚನೆ ಹೊರಡಿಸಿದ್ದು, ಹುದ್ದೆಗಾಗಿ ಕಾಯುತ್ತಿರುವ ಸತ್ಯವತಿ ಜಿ., ಐಎಎಸ್ (ಕೆಎನ್: 2004) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಬೆಂಗಳೂರಿನ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತರಾದ ಶಿವಕುಮಾರ್ ಕೆ.ಬಿ., ಐಎಎಸ್ (ಕೆ.ಬಿ., 2010) ಅವರನ್ನು ತಕ್ಷಣದಿಂದ…

Read More

ಸರ್ಕಾರಿ ಕ್ರೀಡಾಕೂಟದ ಪ್ರಮಾಣ ಪತ್ರದಲ್ಲಿ ಯೇಸು, ಮೇರಿ ಭಾವಚಿತ್ರ: ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪ

ಚಾಮರಾಜನಗರ: ಸರ್ಕಾರಿ ಕ್ರೀಡಾಕೂಟದ ಪ್ರಮಾಣ ಪತ್ರದಲ್ಲಿ ಯೇಸು, ಮೇರಿಯ ಭಾವಚಿತ್ರ ಮುದ್ರಿಸುವ ಮೂಲಕ ಚಾಮರಾಜನಗರ (Chamarajanagara) ಸರ್ಕಾರಿ ಪದವಿ ಪೂರ್ವ ಶಿಕ್ಷಣ ಇಲಾಖೆ ಎಡವಟ್ಟು ಮಾಡಿಕೊಂಡಿದೆ. ಇದಕ್ಕೆ ಸಾರ್ವಜನಿಕರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಇತ್ತೀಚಿಗೆ ಚಾಮರಾಜನಗರ ಜಿಲ್ಲೆಯ ಹನೂರಿನಲ್ಲಿ ನಡೆದ ತಾಲೂಕು ಮಟ್ಟದ ಪ.ಪೂ. ಕಾಲೇಜುಗಳ ಕ್ರೀಡಾಕೂಟದಲ್ಲಿ ಈ ಘಟನೆ ನಡೆದಿದೆ. ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ), ಹನೂರಿನ ಕ್ರಿಸ್ತರಾಜ ಪ.ಪೂ. ಕಾಲೇಜು ಹಾಗೂ ಮಾರ್ಟಳ್ಳಿಯ ಸೇಂಟ್ ಮೇರಿಸ್, ಪ.ಪೂ. ಕಾಲೇಜು ಸಂಯುಕ್ತ ಆಶ್ರಯದಲ್ಲಿ ಕ್ರೀಡಾಕೂಟ ನಡೆಸಲು ಅವಕಾಶ…

Read More

ಮುಂಡಗೋಡ ಸಾಹಿತ್ಯ ಸಮ್ಮೇಳನದ ಕುರಿತು ಶಾಸಕ ಹೆಬ್ಬಾರ್ ಭೇಟಿ… ಚರ್ಚೆ…

ಮುಂಡಗೋಡ : ಮುಂಡಗೋಡ ತಾಲೂಕಾ 7ನೇ ಕನ್ನಡ ಸಾಹಿತ್ಯ ಸಮ್ಮೇಳನ ಮಾಡುವ ಕುರಿತು ಕನ್ನಡ ಸಾಹಿತ್ಯ ಪರಿಷತ್ತಿನ ಮುಂಡಗೋಡ ತಾಲೂಕಾಧ್ಯಕ್ಷರಾದ ವಸಂತ ಕೊಣಸಾಲಿ ನೇತೃತ್ವದಲ್ಲಿ ಯಲ್ಲಾಪುರ ಕ್ಷೇತ್ರದ ಶಾಸಕರಾದ ಶಿವರಾಮ ಹೆಬ್ಬಾರ್ ಅವರನ್ನು ಭೇಟಿಯಾಗಿ ಚರ್ಚಿಸಲಾಯಿತು.  ಈ ಸಂದರ್ಭದಲ್ಲಿ ಶಾಸಕರಾದ ಶಿವರಾಮ ಹೆಬ್ಬಾರ ಅವರನ್ನು ಸನ್ಮಾನಿಸಲಾಯಿತು.ಕ.ಸಾ.ಪ.ನ ಮಾಜಿ ಅಧ್ಯಕ್ಷರಾದ ಡಾ.ಪಿ.ಪಿ.ಛಬ್ಬಿ, 5ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾದ ರಾಜಶೇಖರ ನಾಯ್ಕ, ಕೆ.ಡಿ.ಪಿ. ನಾಮನಿರ್ದೇಶನ ಸದಸ್ಯ ಗೋಪಾಲ ಪಾಟೀಲ, ಕ.ಸಾ.ಪ. ಸದಸ್ಯ ಸುಭಾಸ ವಡ್ಡರ ಇದ್ದರು. 

Read More

ಗೃಹಲಕ್ಷ್ಮಿ ಹಣದಿಂದ ಸೊಸೆಗೆ ಫ್ಯಾನ್ಸಿ ಸ್ಟೋರ್ ಹಾಕಿಸಿ‌ಕೊಟ್ಟ ಅತ್ತೆ..!

ಹಾವೇರಿ : ಕಾಂಗ್ರೆಸ್ ಸರ್ಕಾರ ಗೃಹಲಕ್ಷ್ಮೀ ಯೋಜನೆ ಜಾರಿ ಮಾಡಿದಾಗ ರಾಜ್ಯಾದ್ಯಂತ ಪರ-ವಿರೋಧ ತೀವ್ರ ಚರ್ಚೆಗೆ ಹುಟ್ಟುಹಾಕಿತ್ತು. ಗೃಹಲಕ್ಷ್ಮೀ ಯೋಜನೆಯಡಿ ಮನೆ ಯಜಮಾನತಿಗೆ ಮಾಸಿಕ ಎರಡು ಸಾವಿರ ಕೊಡುವುದರಿಂದ ಮನೆಯಲ್ಲಿ ಅತ್ತೆ ಸೊಸೆ ಮಧ್ಯೆ ಜಗಳಕ್ಕೆ ಕಾರಣವಾಗುತ್ತದೆ. ಕುಟುಂಬಗಳು ಹೊಡೆದಾಡಿಕೊಂಡು ಬೀದಿಗೆ ಬೀಳುತ್ತವೆ ಎಂದು ವಿರೋಧ ಪಕ್ಷಗಳು ಟೀಕಿಸಿದವು. ಅದ್ಯಾವುದು ಆಗಲಿಲ್ಲ. ಬದಲಾಗಿ ಗೃಹಲಕ್ಷ್ಮೀ ಹಣವನ್ನ ಕೂಡಿಟ್ಟು ಅತ್ತೆಯೇ ಸೊಸೆಗಾಗಿ ಫ್ಯಾನ್ಸಿ ಸ್ಟೋರ್ ಹಾಕಿಸಿಕೊಟ್ಟ ಅಪರೂಪದ ಘಟನೆಗೆ ಹಾವೇರಿ ಜಿಲ್ಲೆ ಸಾಕ್ಷಿಯಾಗಿ, ಇದೀಗ ಎಲ್ಲರ ಗಮನ ಸೆಳೆಯುತ್ತಿದೆ.  ಶಿಗ್ಗಾವಿ…

Read More

‘ಗೃಹಲಕ್ಷ್ಮಿ ಹಣ’ದಲ್ಲಿ ಊರಿಗೆ ಹೋಳಿಗೆ ಊಟ ಹಾಕಿಸಿದ್ದ ‘ಅಕ್ಕಾತಾಯಿ’ಗೆ ಸಿಎಂ ಸಿದ್ಧರಾಮಯ್ಯ ಸನ್ಮಾನ

ಬೆಳಗಾವಿ : ನಾಡಿಗೆ ಅನ್ನ ಕೊಡೋ ದೊರೆ ನಿನ್ನ ಕೈ ಮೇಲಾಗ್ಲಿ ಎಂದು ರಾಯಬಾಗ್ ತಾಲ್ಲೂಕಿನ‌ ಸುಟ್ಟಟ್ಟಿ ಗ್ರಾಮದ ಅಕ್ಕಾತಾಯಿ ಮುಖ್ಯಮಂತ್ರಿಗಳಿಗೆ ಆಶೀರ್ವಾದ ಮಾಡಿದರು. ಗೃಹಲಕ್ಷ್ಮಿ ಹಣದಲ್ಲಿ ಗ್ರಾಮಕ್ಕೇ ಹೋಳಿಗೆ ಊಟ ಹಾಕಿದ ಅಕ್ಕಾತಾಯಿ ಲಂಗೂಟಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗಾವಿ ವಿಮಾನ‌ನಿಲ್ದಾಣದಲ್ಲಿ‌ ಸನ್ಮಾನಿಸಿದರು. ಸನ್ಮಾನ ಸ್ವೀಕರಿಸಿದ ಬಳಿಕ‌ ಅಕ್ಕಾತಾಯಿ ಸಿಎಂಗೆ ತುಂಬು ಹೃದಯದಿಂದ ಆಶೀರ್ವದಿಸಿದರು.  ಕೈ ಮೇಲಾಗ್ಲಿ-ದೇಶ ಆಳು ದೊರೆಯೇ ನಾಡಿಗೆ ಅನ್ನ ಕೊಡೋ ದೊರೆ ನೀನು. ನಿಮ್ಮ ಕೈ ಇನ್ನೂ ಮೇಲಾಗ್ಲಿ. ನಾಡ ಆಳುವ…

Read More

‘ಅನ್ನಭಾಗ್ಯ’ದ ಅಕ್ಕಿಯಲ್ಲಿ ‘ಪ್ಲಾಸ್ಟಿಕ್ ಅಕ್ಕಿ’ಯಂತಹ ಕಾಳುಗಳು ಇವೆಯೇ? ಭಯಬೇಡ, ಆ ಬಗ್ಗೆ ಇಲ್ಲಿದೆ ಮಾಹಿತಿ

ಬೆಂಗಳೂರು: ನಿಮ್ಮ ಮನೆಗೆ ತಂದ ಅನ್ನಭಾಗ್ಯದ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿಯಂತಹ ಕಾಳುಗಳು ಇವೆಯೇ? ಅದೇನು ಎಂದು ತಿಳಿಯಬೇಕೇ? ಈ ಬಗ್ಗೆ ನಿಮಗೂ ಆಂತಕವಿದೆಯೇ? ಭಯಪಡದಿರಿ, ಅದು ಪ್ಲಾಸ್ಟಿಕ್ ಅಕ್ಕಿಯಲ್ಲ, ಸಾರವರ್ಧಿತ ಅಕ್ಕಿ. ಆ ಬಗ್ಗೆ ಮುಂದೆ ಓದಿ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಮಾಹಿತಿ ನೀಡಲಾಗಿದ್ದು, ಅನ್ನಭಾಗ್ಯದ ಪಡಿತರ ಅಕ್ಕಿಯಲ್ಲಿ ಸ್ವಲ್ಪ ಪ್ರಮಾಣದ ಅಕ್ಕಿ ನೀರಲ್ಲಿ ಮುಳುಗದೆ ತೇಲುತ್ತಿರುವುದನ್ನು ಕಂಡು, ಅದು ಪ್ಲಾಸ್ಟಿಕ್ ಅಕ್ಕಿ ಎಂದು ಜನ ಗೊಂದಲಕ್ಕೆ ಈಡಾಗುತ್ತಿರುವುದು ವರದಿಯಾಗುತ್ತಿದೆ. ಆದರೇ ಇದು ಆತಂಕ ಪಡುವ…

Read More

ಬೆಳಗಾವಿಯ ಹಿಂಡಲಗಾ ಜೈಲಿಗೆ ನಟ ದರ್ಶನ್ ಶಿಫ್ಟ್?

ಬೆಳಗಾವಿ : ಬೆಂಗಳೂರಿನ ಪರಪ್ಪನ ಆಗ್ರಹಾರದಲ್ಲಿರುವ (Parappana Agrahara) ನಟ ದರ್ಶನ್ ಅವರನ್ನು ಸಿಎಂ ಸಿದ್ದರಾಮಯ್ಯ ಬೇರೆ ಜೈಲಿಗೆ ಕಳುಹಿಸಲು ಸೂಚನೆ ನೀಡಿದ ಬೆನ್ನಲ್ಲೇ ಬೆಳಗಾವಿಯ ಹಿಂಡಲಗಾ ಜೈಲಿಗೆ ದರ್ಶನ್ ಸ್ಥಳಾಂತರವಾಗುವ ಸಾಧ್ಯತೆಯಿದೆ.   ಕಾರಾಗೃಹ ಡಿಜಿಪಿ ಮಾಲಿನಿ ಕೃಷ್ಣಮೂರ್ತಿ ಪ್ರಮುಖ ಜೈಲುಗಳ ಮಾಹಿತಿ ಸಂಗ್ರಹ ಮಾಡುತ್ತಿದ್ದಾರೆ. ಬೆಳಗಾವಿಯ ಹಿಂಡಲಗಾ ಜೈಲಿನ ಬಂದೋಬಸ್ತ್ ವ್ಯವಸ್ಥೆ ಮತ್ತು ದರ್ಶನ್ ಅಥವಾ ಆತನ ಗ್ಯಾಂಗ್ ಶಿಫ್ಟ್ ಮಾಡಿದರೆ ಆಗುವ ಸಾಧಕ ಬಾಧಕಗಳ ಕುರಿತು ಮಾಹಿತಿ ಸಂಗ್ರಹಿಸಲಾಗಿದೆ. ಇದರಿಂದಾಗಿ ಆರೋಪಿ ನಟ ದರ್ಶನ್ ಅಥವಾ…

Read More

ದರ್ಶನ್‌ನನ್ನು ಬೇರೆ ಜೈಲಿಗೆ ಕಳಿಸಿ: ಸಿಎಂ ತಾಕೀತು

ಬೆಂಗಳೂರು: ಆರೋಪಿ ದರ್ಶನ್ (Darshan)) ಮತ್ತು ಇತರರನ್ನು ಕೂಡಲೇ ಬೇರೆ ಬೇರೆ ಕಾರಾಗೃಹಗಳಿಗೆ ಸ್ಥಳಾಂತರ ಮಾಡುವಂತೆ ಸಿಎಂ ಸಿದ್ದರಾಮಯ್ಯ (CM Siddaramaiah) ತಾಕೀತು ಮಾಡಿದ್ದಾರೆ ಎಂದು ಸಿಎಂ ಮಾಧ್ಯಮ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ. ಪರಪ್ಪನ ಅಗ್ರಹಾರ (Parappana Agrahara) ಜೈಲಿನಲ್ಲಿ ನಟ ದರ್ಶನ್ ಮತ್ತಿತರರಿಗೆ ರಾಜಾತಿಥ್ಯ ಒದಗಿಸುತ್ತಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸಿಎಂ, ತಪ್ಪಿತಸ್ತ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡುವಂತೆ ಸೂಚಿಸಿದ್ದಾರೆ.

Read More

ಮುಂಡಗೋಡ : ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

ಮುಂಡಗೋಡ : ಮುಂಡಗೋಡದ ತಹಶೀಲ್ದಾರ್ ಕಚೇರಿಯಲ್ಲಿ ಸೋಮವಾರ ಶ್ರೀ ಕೃಷ್ಣ ಜನ್ಮಾಷ್ಟಮಿ ನಿಮಿತ್ತ ಪೂಜಾ ಕಾರ್ಯಕ್ರಮ ನಡೆಯಿತು.   ಈ ಸಂದರ್ಭದಲ್ಲಿ ತಹಶೀಲ್ದಾರ ಶಂಕರ ಗೌಡಿ, ಗ್ರೇಡ್-2 ತಹಶೀಲದಾರ ಚಂದ್ರಶೇಖರ್ ಹೊಸಮನಿ, ಸಹಾಯಕ ತೋಟಗಾರಿಕಾ ನಿರ್ದೇಶಕ ಕೃಷ್ಣ ಕುಳ್ಳೂರ, ಪಂಚಾಯತ ರಾಜ್ ಜಿ.ಪಂ. ಇಂಜಿನೀಯರಿಂಗ್ ವಿಭಾಗದ ಇಂಜಿನೀಯರ ಪ್ರದೀಪ ಭಟ್, ಆರ್.ಬಿ.ಕರೂರ, ಎ.ವಿ.ಪಾಟೀಲ, ಗೋಣಿಬಸಪ್ಪ, ನವೀನ ಕುಲಕರ್ಣಿ, ಶಿವಾಜಿ ಸುಣಗಾರ, ರಾಜು ಬಸಾಪುರ, ತಹಶೀಲದಾರ ಕಚೇರಿಯ ಸಿಬ್ಬಂದಿಗಳು ಇದ್ದರು.

Read More

‘ನನ್ನ ಜೊತೆಗಿದ್ದ ಹುಡುಗರಿಂದ ನಾನು ಹಾಳಾದೆ’: ಪೊಲೀಸರ ಮುಂದೆ ನಟ ದರ್ಶನ್‌ ಪಶ್ಚಾತಾಪ

ಬೆಂಗಳೂರು: ನನ್ನ ಜೊತೆಗಿದ್ದ ಹುಡುಗರಿಂದ ನಾನು ಹಾಳಾದೆ ಅಂಥ ತನಿಖೆ ವೇಳೆ ಪೊಲೀಸರ ಮುಂದೆ ನಟ ದರ್ಶನ್‌ ಪಶ್ಚಾತಾಪದ ಮಾತುಗಳನ್ನು ಹೇಳಿದ್ದಾರೆ ಎನ್ನಲಾಗಿದೆ. ಸದ್ಯ ರೇಣುಕಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ನಟ ದರ್ಶನ್‌ ಪರಪ್ಪನ ಅಗ್ರಹಾರದಲ್ಲಿರುವ ಜೈಲಿನಲ್ಲಿ ದಿನ ಕಳೆಯುತ್ತಿದ್ದಾರೆ. ಇತ್ತ ನಟ ದರ್ಶನ್‌ ಪ್ರೇಯಸಿ ಕೂಡ ಈಗ ಉಲ್ಟಾ ಹೊಡೆಯುತ್ತಿದ್ದಾಳೆ ಎನ್ನಲಾಗಿದ್ದು, ಕೋರ್ಟಿನಲ್ಲಿ ಜಾಮೀನಿಗಾಗಿ ಅರ್ಜಿ ಸಲ್ಲಿಸಿರುವುದು ಈಗ ಎಲ್ಲರ ಹುಬ್ಬೇರಿಸುವಂತೆ ಮಾಡಿದೆ. ದರ್ಶನ್‌ ಗೆಳತಿ ಪವಿತ್ರಗೌಡಳಿಂದಲೇ ಪ್ರಕರಣ ಈ ಹಂತಕ್ಕೆ ಬಂದು ನಿಂತಿದೆ…

Read More