ಶಾಸಕ ಹೆಬ್ಬಾರರಿಗೆ ರಾಜೀನಾಮೆ ಆಗ್ರಹಿಸಿ ಬೆದರಿಕೆ : `ಸ್ಟೇಟಸ್’ ನೋಡಿ ಕ್ರಮ ಜರುಗಿಸಿದ ಪೊಲೀಸರು..!

ಯಲ್ಲಾಪುರ : ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ರಾಜೀನಾಮೆಗೆ ಆಗ್ರಹಿಸಿ ವೈಯಕ್ತಿಕ ನಿಂದನೆ ಮಾಡಿದ ಕಾರಣ ಪಟ್ಟಣ ಪಂಚಾಯತ ಸದಸ್ಯ ಸೋಮು ನಾಯ್ಕ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ( Sumoto ) ದಾಖಲಿಸಿಕೊಂಡಿದ್ದಾರೆ. ಆಗಸ್ಟ 19ರಂದು ಸಂಜೆ 6 ಗಂಟೆಗೆ ಪೊಲೀಸ್‌ ಸಿಬ್ಬಂದಿ ಚನ್ನಕೇಶವ ಡಿಕೆ ಅವರು ತಮ್ಮ ಮೊಬೈಲ್ ನೋಡುತ್ತಿದ್ದಾಗ ಸೋಮು ನಾಯ್ಕ ತನ್ನ ವಾಟ್ಸಪ್ ಸ್ಟೇಟಸ್ಸಿನಲ್ಲಿ ಶಿವರಾಮ ಹೆಬ್ಬಾರ್ ಅವರ ಫೋಟೋ ಹಾಕಿಕೊಂಡಿರುವುದು ಕಾಣಿಸಿದೆ. ಅದರ ಜೊತೆ ಪಟ್ಟಣ…

Read More

ಮುಂಡಗೋಡ ಪ.ಪಂ.ಅಧ್ಯಕ್ಷರಾಗಿ ಜಯಸುಧಾ, ಉಪಾಧ್ಯಕ್ಷರಾಗಿ ರಹಿಮಾಬಾನು ಆಯ್ಕೆ

ಮುಂಡಗೋಡ : ಮುಂಡಗೋಡ ಪಟ್ಟಣ ಪಂಚಾಯತಿ ನೂತನ ಅಧ್ಯಕ್ಷರಾಗಿ ಜಯಸುಧಾ ಭೋವಿವಡ್ಡರ್ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ರಹಿಮಾಬಾನು ಕುಂಕೂರ ಆಯ್ಕೆಯಾಗಿದ್ದಾರೆ.

Read More

ಪ್ರಧಾನಿ ವಿರುದ್ಧ ರಾಷ್ಟ್ರಪತಿ ‘ಪ್ರಾಸಿಕ್ಯೂಷನ್’ ಗೆ ಕೊಟ್ಟರೆ ಮೋದಿ ರಾಜೀನಾಮೆ ನೀಡ್ತಾರಾ : ಸಂತೋಷ್ ಲಾಡ್ ವಾಗ್ದಾಳಿ

ಧಾರವಾಡ : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿರುವ ವಿಚಾರವಾಗಿ ಸಚಿವ ಸಂತೋಷ್ ಲಾಡ್, ಪ್ರಧಾನಿ ವಿರುದ್ಧ ರಾಷ್ಟ್ರಪತಿ ಅವರು ರಾಜೀನಾಮೆ ನೀಡುತ್ತಾರಾ ಎಂದು ಆಕ್ರೋಶ ಹೊರ ಹಾಕಿದರು. ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರು ಪೊಲಿಟಿಕಲ್ ಟೂಲ್ ಕೆಲಸ ಮಾಡುತ್ತಿದ್ದಾರೆ. ಯಾವುದೇ ರೀತಿಯ ಕಾನೂನು ಅವಕಾಶವೇ ಇರಲಿಲ್ಲ. ರಾಜಕೀಯ ಪ್ರೇರಿತವಾಗಿ ಪ್ರಾಸಿಕ್ಯೂಷನ್ ಗೆ ಕೊಟ್ಟಿದ್ದಾರೆ ಎಂದು ಧಾರವಾಡದಲ್ಲಿ ಸಚಿವ ಸಂತೋಷ್ ಲಾಡ್ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯ ಅವರ 40…

Read More

ಮುಂಡಗೋಡ : ಪ. ಪಂ. ಅಧ್ಯಕ್ಷೆಯಾಗಿ ಕುಸುಮಾ ಹಾವಣಗಿ, ಉಪಾಧ್ಯಕ್ಷೆಯಾಗಿ ರಹೀಮಾಬಾನು ಕುಂಕೂರ ಆಯ್ಕೆ ಖಚಿತ..?

ಮುಂಡಗೋಡ : ಮುಂಡಗೋಡ ಪಟ್ಟಣ ಪಂಚಾಯತದ ನೂತನ ಅಧ್ಯಕ್ಷೆಯಾಗಿ ಕುಸುಮಾ ಹಾವಣಗಿ ಆಯ್ಕೆಯಾಗುವ ಸಾಧ್ಯತೆ ನಿಚ್ಚಳವಾಗಿದೆ.  ನಾಳೆ ಮಂಗಳವಾರ(ಆ.20ರಂದು) ಚುನಾವಣೆ ನಡೆಯಲಿದ್ದು, ಶಾಸಕ ಶಿವರಾಮ ಹೆಬ್ಬಾರ ಅವರು ಎರಡು ದಿನಗಳಿಂದ ಯಲ್ಲಾಪುರದಲ್ಲಿ ಕುಳಿತು, ರಾಜಕೀಯ ಚದುರಂಗದಾಟ ನಡೆಸಿದ್ದು, ಬಿಜೆಪಿಯಿಂದ ಆರಿಸಿ ಬಂದಿರುವ ಕುಸುಮಾ ಹಾವಣಗಿ ಅವರು, ಈಚೆಗೆ ಕಾಂಗ್ರೆಸ್ ಪಕ್ಷ ಸೇರ್ಪಡೆ ಆಗಿದ್ದಾರೆ. ಅವರನ್ನೇ ಅಧ್ಯಕ್ಷರನ್ನಾಗಿ ಮಾಡಲು ಶಾಸಕ ಹೆಬ್ಬಾರ ತೀರ್ಮಾನಿಸಿದ್ದಾರೆ ಎನ್ನಲಾಗಿದೆ. ಇನ್ನೂ ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದ ರಹಿಮಾಬಾನು ಕುಂಕೂರ ಅವರನ್ನು ಮಾಡಲು ತೀರ್ಮಾನಿಸಲಾಗಿದೆ.ಕಾಂಗ್ರೆಸ್…

Read More

ವಿಚಾರಣೆ ಮುಗಿಯುವವರೆಗೂ CM ಸಿದ್ದರಾಮಯ್ಯ ವಿರುದ್ಧ ಕ್ರಮ ಕೈಗೊಳ್ಳದಂತೆ ವಿಚಾರಣಾ ನ್ಯಾಯಾಲಯಕ್ಕೆ ಹೈಕೋರ್ಟ್ ಸೂಚನೆ

ಬೆಂಗಳೂರು: ವಿಚಾರಣೆ ಮುಗಿಯುವವರೆಗೂ CM ಸಿದ್ದರಾಮಯ್ಯವಿರುದ್ಧ ಕ್ರಮ ಕೈಗೊಳ್ಳದಂತೆ ವಿಚಾರಣಾ ನ್ಯಾಯಾಲಯಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. ಮುಡಾ ಪ್ರಕರಣದಲ್ಲಿ ತನ್ನ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಲಾಗಿತ್ತು. ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠದ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಯಿತು. ಸಿಎಂ ಪರವಾಗಿ ಸುಪ್ರೀಂ ಕೋರ್ಟ್‌ ಹಿರಿಯ ವಕೀಲ ಅಭಿಷೇಕ್ ಮನು ಸಂಘ್ವಿ ವಾದ ಮಂಡಿಸಿದರು. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿ ತಮ್ಮ ಕುಟುಂಬಸ್ಥರಿಗೆ ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ…

Read More

Muda : ಸಿ.ಎಂ. ವಿರುದ್ದ ತನಿಖೆಗೆ ಅನುಮತಿ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ಕಾರವಾರ : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ(ಮುಡಾ) ನಡೆದಿರುವ ಹಗರಣದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಚಾರಣೆ ನಡೆಸಲು ರಾಜ್ಯಪಾಲರು ಅನುಮತಿ ನೀಡಿರುವುದನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಇಂದು ಪ್ರತಿಭಟನೆ ನಡೆಸಿದರು.  ಮಿತ್ರ ಸಮಾಜ ಮೈದಾನದಲ್ಲಿ ಸೇರಿದ ಮುಖಂಡರು, ಕಾರ್ಯಕರ್ತರು ರಾಜ್ಯಪಾಲರ ನಡೆಯನ್ನು ಖಂಡಿಸಿದರು.ನಗರದ ಮುಖ್ಯ ರಸ್ತೆಗಳ ಮೂಲಕ ಮೆರವಣಿಗೆ ನಡೆಸಿ, ರಾಜ್ಯಪಾಲರ ವಜಾಗೊಳಿಸಲು ಆಗ್ರಹಿಸಿದರು. ಭ್ರಷ್ಟಾಚಾರ ಆರೋಪವಿರುವ ಬಿಜೆಪಿ, ಜೆಡಿಎಸ್ ನಾಯಕರ ವಿರುದ್ಧ ತನಿಖೆಗೆ ಅನುಮತಿಸದಿರುವುದೇಕೆ? ಎಂದು ಪ್ರಶ್ನಿಸುವ ಭಿತ್ತಿಫಲಕ ಪ್ರದರ್ಶಿಸಿದರು.ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ…

Read More

ಮಂಗಳೂರಲ್ಲಿ ಪ್ರತಿಭಟನೆ ವೇಳೆ ಬಸ್ ಮೇಲೆ ಕಲ್ಲು ತೂರಾಟ : ಮೂವರು ಕಾಂಗ್ರೆಸ್ ಕಾರ್ಯಕರ್ತರ ಬಂಧನ!

ಮಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ವಿಚಾರವಾಗಿ ರಾಜ್ಯಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಅದರಂತೆ ಮಂಗಳೂರಿನಲ್ಲಿ ಪ್ರತಿಭಟನೆಯ ವೇಳೆ ಖಾಸಗಿ ಬಸ್ಸಿನ ಮೇಲೆ ಕಲ್ಲು ತೂರಾಟ ನಡೆಸಿದ್ದ ಮೂವರು ಕಾಂಗ್ರೆಸ್ ಕಾರ್ಯಕರ್ತರನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ. ಹೌದು ಮಂಗಳೂರಿನ ಬರ್ಕೆ ಠಾಣೆ ಪೋಲಿಸ್ರಿಂದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ನಗರ ಪಾಲಿಕೆಯ ನಾಮ ನಿರ್ದೇಶಿತ ಸದಸ್ಯ ಕಿಶೋರ್ ಶೆಟ್ಟಿ, ಕಾಂಗ್ರೆಸ್ ಕಾರ್ಯಕರ್ತರಾದ ಶಾಹುಲ್ ಹಮೀದ್ ಹಾಗೂ…

Read More

ಸಿದ್ದರಾಮಯ್ಯ ಬೆನ್ನಿಗೆ ಕೇವಲ ಡಿಕೆಶಿ ಅಷ್ಟೆ ನಿಂತಿಲ್ಲ, ಕಟ್ಟ ಕಡೆಯ ಕಾರ್ಯಕರ್ತರ ‘ರಕ್ಷೆಯು’ ಇದೆ : ಡಿಕೆ ಶಿವಕುಮಾರ್

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ರಾಜ್ಯಪಾಲರು ಪ್ರಾಜಿಕ್ಯೂಷನ್ ಗೆ ಅನುಮತಿ ನೀಡಿರುವ ವಿಚಾರವಾಗಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು. ಈ ವೇಳೆ ಡಿಸಿಎಂ ಡಿಕೆ ಸಿದ್ದರಾಮಯ್ಯ ಬೆನ್ನಿಗೆ ಕೇವಲ ಡಿಕೆಶಿ ಅಷ್ಟೆ ನಿಂತಿಲ್ಲ ಕಟ್ಟ ಕಡೆಯ ಕಾರ್ಯಕರ್ತರ ರಕ್ಷೆಯು ಇದೆ ಎಂದು ತಿಳಿಸಿದರು. ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಪ್ರಶ್ನೆಯೇ ಬರುವುದಿಲ್ಲ ಎಂದು ಕಾಂಗ್ರೆಸ್ ಪ್ರತಿಭಟನೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ನೀಡಿದರು. ಬೆಂಗಳೂರಿನ ಫ್ರೀಡಂ…

Read More

ರಾಜ್ಯದಲ್ಲಿ ಗದ್ದಲ, ದಾಂಧಲೆ, ಹಲ್ಲೆಗಳಾದರೆ ರಾಜ್ಯಪಾಲರೇ ಹೊಣೆ: ಸಚಿವ ಜಮೀರ್​ ಅಹ್ಮದ್ ಎಚ್ಚರಿಕೆ

ಬೆಂಗಳೂರು: ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ನೀಡಿದಂತ ಅನುಮತಿ ಖಂಡಿಸಿ, ರಾಜ್ಯಾಧ್ಯಂತ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ರಾಜ್ಯದಲ್ಲಿ ಗದ್ದಲ, ದಾಂಧಲೆ ಹಾಗೂ ಹಲ್ಲೆಗಳಾದರೇ ರಾಜ್ಯಪಾಲರೇ ಹೊಣೆ ಎಂಬುದಾಗಿ ಸಚಿವ ಜಮೀರ್ ಅಹ್ಮದ್ ಖಾನ್ ಎಚ್ಚರಿಕೆ ನೀಡಿದ್ದಾರೆ. ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಕಾಂಗ್ರೆಸ್ ನಾಯಕರು ನಡೆಸುತ್ತಿರುವಂತ ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾತನಾಡಿದಂತ ಅವರು, ಮುಖ್ಯಮಂತ್ರಿ ಸ್ಥಾನದಿಂದ ಸಿದ್ಧರಾಮಯ್ಯ ಇಳಿಸುವ ಪ್ರಶ್ನೆಯೇ ಇಲ್ಲ. ಬಿಜೆಪಿ-ಜೆಡಿಎಸ್ ನಾಯಕರು ಏನೇ ಮಾಡಿದ್ರೂ ಸಿದ್ಧರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು…

Read More

ಕರ್ನಾಟಕ SC, ST ಹಾಗೂ ಹಿಂದುಳಿದ ವರ್ಗಗಳ ನೇಮಕಾತಿ ತಿದ್ದುಪಡಿ ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ

ಬೆಂಗಳೂರು : ಕರ್ನಾಟಕ SC, ST ಹಾಗೂ ಹಿಂದುಳಿದ ವರ್ಗಗಳ ನೇಮಕಾತಿ ತಿದ್ದುಪಡಿ ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ ಹಾಕಿ ರಾಜ್ಯಪತ್ರ ಹೊರಡಿಸಿದ್ದಾರೆ. ಕರ್ನಾಟಕ ಅನುಸೂಚಿತ ಜಾತಿಗಳು, ಅನುಸೂಚಿತ ಬುಡಕಟ್ಟುಗಳು ಮತ್ತು ಇತರ ಹಿಂದುಳಿದ ವರ್ಗಗಳ (ನೇಮಕಾತಿ ಮುಂತಾದವುಗಳ ಮೀಸಲಾತಿ) (ತಿದ್ದುಪಡಿ) ವಿಧೇಯಕ, 2024 ಇದಕ್ಕೆ 2024 ರ ಆಗಸ್ಟ್ ತಿಂಗಳ 15 ನೇ ದಿನಾಂಕದಂದು ರಾಜ್ಯಪಾಲರ ಒಪ್ಪಿಗೆ ದೊರೆತಿದ್ದು, ಸಾಮಾನ್ಯ ತಿಳುವಳಿಕೆಗಾಗಿ ಇದನ್ನು 2024 ರ ಕರ್ನಾಟಕ ಅಧಿನಿಯಮಸಂಖ್ಯೆ:42ಎಂಬುದಾಗಿ ಕರ್ನಾಟಕ ರಾಜ್ಯಪತ್ರದ ವಿಶೇಷ ರಾಜ್ಯಪತ್ರಿಕೆ (ಭಾಗ-IVA) ಯಲ್ಲಿ…

Read More