ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮತ್ತೆ ಭಾರೀ ಮಳೆ : `IMD’ ಮುನ್ಸೂಚನೆ!

ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ನವೆಂಬರ್ 25 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.  ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಚಿಕ್ಕಮಗಳೂರು, ಕೊಡಗು, ಹಾಸನ, ಮಂಡ್ಯ, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ನವೆಂಬರ್ 18 ಮತ್ತು 19 ರಂದು ಮಳೆಯಾಗಲಿದೆ. ಇನ್ನು ದಾವಣಗೆರೆ, ಶಿವಮೊಗ್ಗ, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ,…

Read More

ರಾಜ್ಯ ಕಾಂಗ್ರೆಸ್ ಸರ್ಕಾರ ಕೆಡವಲು ಬಿಜೆಪಿಯಿಂದ 100 ಕೋಟಿ ರೂ. ಆಫರ್ ಬಂದಿದೆ : ಶಾಸಕ ರವಿಕುಮಾರ್ ಗಣಿಗ ಸ್ಪೋಟಕ ಹೇಳಿಕೆ

ಮಂಡ್ಯ : ರಾಜ್ಯ ಕಾಂಗ್ರೆಸ್ ಸರ್ಕಾರ ಕೆಡವಲು ಬಿಜೆಪಿಯು ನಮ್ಮ ಶಾಸಕರಿಗೆ 50 ಕೋಟಿ ಅಲ್ಲ 100 ಕೋಟಿ ರೂ. ಆಫರ್ ನೀಡಿದೆ ಎಂದು ಕಾಂಗ್ರೆಸ್ ಶಾಸಕ ರವಿಕುಮಾರ್ ಗಣಿಗ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ರವಿಕುಮಾರ್ ಗಣಿಗ, ನಮ್ಮ ಸರ್ಕಾರ ಕೆಡವಲು ಬಿಜೆಪಿಯಿಂದ 100 ಕೋಟಿ ರೂ. ಆಫರ್ ಬಂದಿದೆ ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ. ನಮ್ಮ ಇಬ್ಬರು ಶಾಸಕರನ್ನು ಸಂಪರ್ಕಿಸಿ 100 ಕೋಟಿ ರೂ. ಆಫರ್ ನೀಡಲಾಗಿದೆ. ಶೀಘ್ರದಲ್ಲೇ ಆಫರೇಷನ್ ಕಮಲದ…

Read More

ನಟ ದರ್ಶನ್ ಗೆ ಬಿಗ್ ಶಾಕ್ : ಇಂದು ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ಪೊಲೀಸರು ಸಿದ್ಧತೆ!

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಇತ್ತೀಚಿಗೆ ನಟ ದರ್ಶನ್ ಅವರು ಬೆನ್ನು ನೋವಿನ ಕಾರಣ ನೀಡಿ ಹೈಕೋರ್ಟ್ ನಿಂದ ಮಧ್ಯಂತರ ಜಾಮೀನು ಪಡೆದುಕೊಂಡು ಬಳ್ಳಾರಿ ಜೈಲಿನಿಂದ ಬಿಡುಗಡೆಯಾಗಿದ್ದರು. ಬಳಿಕ ಬೆಂಗಳೂರಿನ ಕೆಂಗೇರಿ ಬಳಿ ಇರುವ ಬಿಡಿಎಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ, ಪೊಲೀಸರು ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ಸಿದ್ದತೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಹೌದು ಬಳ್ಳಾರಿ ಜೈಲಿನಿಂದ ಬಿಡುಗಡೆಯಾದರೂ ಕೂಡ ನಟ ದರ್ಶನ್ ಗೆ ರಿಲೀಫ್ ಇಲ್ಲದಂತಾಗಿದೆ. ಇದಕ್ಕೆ ಕಾರಣ…

Read More

ಇನ್ಮುಂದೆ ಈ ವಾಹನಗಳು `ಟೋಲ್ ತೆರಿಗೆ’ ಪಾವತಿಸಬೇಕಾಗಿಲ್ಲ : ಮೋದಿ ಸರ್ಕಾರದಿಂದ ಮಹತ್ವದ ನಿರ್ಧಾರ!

ನವದೆಹಲಿ : ಟೋಲ್ ತೆರಿಗೆಗೆ ಸಂಬಂಧಿಸಿದಂತೆ ಮೋದಿ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕೇಂದ್ರ ರಸ್ತೆ ಮತ್ತು ಸಾರಿಗೆ ಸಚಿವಾಲಯವು ಹೊಸ ನಿಯಮಗಳನ್ನು ಪ್ರಕಟಿಸಿದ್ದು, ಈಗ ಗ್ಲೋಬಲ್ ನ್ಯಾವಿಗೇಷನ್ ಸ್ಯಾಟಲೈಟ್ ಸಿಸ್ಟಮ್ (ಜಿಎನ್ಎಸ್ಎಸ್) ಬಳಸುವ ಖಾಸಗಿ ವಾಹನ ಚಾಲಕರು ಟೋಲ್ ತೆರಿಗೆ ಪಾವತಿಸಬೇಕಾಗಿಲ್ಲ. ಮೇಲಾಗಿ, ಈ ಚಾಲಕರು 20 ಕಿಮೀ ವ್ಯಾಪ್ತಿಯೊಳಗೆ ಮಾತ್ರ ಟೋಲ್ ರಸ್ತೆಗಳನ್ನು ಬಳಸಿದರೂ, ಅವರು ಯಾವುದೇ ಟೋಲ್ ತೆರಿಗೆಯನ್ನು ಪಾವತಿಸಬೇಕಾಗಿಲ್ಲ. ಈ ಹೊಸ ನಿಯಮದ ಪ್ರಕಾರ, ಜಿಎನ್‌ಎಸ್‌ಎಸ್ ವ್ಯವಸ್ಥೆಯನ್ನು ಬಳಸುವ ಖಾಸಗಿ ವಾಹನ…

Read More

ಇಂಗ್ಲಿಷ್ : ಪ್ರಶ್ನೆ ಪತ್ರಿಕೆ ಕಾರ್ಯಗಾರ

ಮುಂಡಗೋಡ : ಮುಂಡಗೋಡ ತಾಲೂಕಾ ಇಂಗ್ಲಿಷ್ ವಿಷಯ ವೇದಿಕೆಯ ವತಿಯಿಂದ ಶಿಕ್ಷಣ ಇಲಾಖೆಯ ಆದೇಶದಂತೆ ಮುಂಡಗೋಡ ತಾಲೂಕಿನ ಪ್ರೌಢಶಾಲೆಗಳಲ್ಲಿ ಇಂಗ್ಲಿಷ್ ಬೋಧನೆ ಮಾಡುವ ಶಿಕ್ಷಕರು  ಕ್ಷೇತ್ರ ಶಿಕ್ಷಣಾಧಿಕಾರಿಗಳ ಆದೇಶದಂತೆ ಅಂದಲಗಿಯ ಸರ್ಕಾರಿ ಪ್ರೌಢಶಾಲೆಯಲ್ಲಿ   ಪ್ರಶ್ನೆ ಪತ್ರಿಕೆ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು.  ಈ ಕಾರ್ಯಾಗಾರವನ್ನು ಶಿರಸಿ ಶೈಕ್ಷಣಿಕ ಜಿಲ್ಲಾ ಪ್ರೌಢಶಾಲಾ ಮುಖ್ಯಾಧ್ಯಾಪಕರ ಸಂಘದ ಜಿಲ್ಲಾಧ್ಯಕ್ಷರಾದ ಎಸ್.ಡಿ.ಮುಡೆಣ್ಣವರ ಉದ್ಘಾಟಿಸಿ ಮಾತನಾಡುತ್ತಾ, ಇಂದು ಅಂದಲಗಿ ಸರ್ಕಾರಿ ಪ್ರೌಢಶಾಲೆಯಲ್ಲಿ ಇಂಗ್ಲಿಷ್ ಪ್ರಶ್ನೆ ಪತ್ರಿಕೆ ಕಾರ್ಯಗಾರದ ಕಾರ್ಯಕ್ರಮ ಹಮ್ಮಿಕೊಂಡಿದ್ದು ಬಹಳ  ಉಪಯುಕ್ತ ಮತ್ತು ಇಂಗ್ಲಿಷ್ ಕಲಿಕೆಯಲ್ಲಿ ವಿದ್ಯಾರ್ಥಿಗಳಿಗೆ…

Read More

ಅಪ್ಪ-ಮಕ್ಕಳು ಒಬ್ಬೊರನ್ನ ಕೈ ಬಿಡ್ತಾರೆ… ಇದೇ ದಂಧೆ ಮಾಡ್ತಾರೆ : ಮತ್ತೆ ಸಿಡಿದ ಯತ್ನಾಳ್‌

ಹುಬ್ಬಳ್ಳಿ: ಅಪ್ಪ-ಮಕ್ಕಳಿಬ್ಬರು ಒಬ್ಬೊರನ್ನ ಕೈ ಬಿಡ್ತಾರೆ, ಇದೇ ದಂಧೆ ಮಾಡ್ತಾರೆ. ವಕ್ಫ್ ಬೋರ್ಡ್ ಬಗ್ಗೆ ಕಾಳಜಿ ಇಲ್ಲ. ಮುಡಾ, ವಾಲ್ಮೀಕಿ ಹಗರಣಗಳ ಬಗ್ಗೆ ಕಾಳಜಿ ಇಲ್ಲ. ಅವರ ಕಾಳಜಿ ಸಿಎಂ ಹೇಗೆ ಆಗಬೇಕು? ಅಪ್ಪನ ಹಾಗೇ ಹೇಗೆ ಲೂಟಿ ಮಾಡಬೇಕು ಅಂತ ಅಷ್ಟೇ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮತ್ತು ಯಡಿಯೂರಪ್ಪ ವಿರುದ್ಧ ಮತ್ತೊಮ್ಮೆ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಗುಡುಗಿದ್ದಾರೆ.  ಹುಬ್ಬಳ್ಳಿಯಲ್ಲಿ ಜನ ಜಾಗೃತಿ ತಂಡದಲ್ಲಿ ಪ್ರತಾಪ್ ಸಿಂಹ ಕೈ ಬಿಟ್ಟ ವಿಚಾರವಾಗಿ ಮಾತನಾಡಿದ ಅವರು,…

Read More

ಮುಂಡಗೋಡ : ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಸುಭಾಸ ಡೋರಿ‌ ಆಯ್ಕೆ

ಮುಂಡಗೋಡ : ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘದ ಮುಂಡಗೋಡ ತಾಲೂಕ ಅಧ್ಯಕ್ಷರಾಗಿ ಸುಭಾಷ್ ಡೋರಿ ಆಯ್ಕೆಯಾಗಿದ್ದಾರೆ.  ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘದ ಮುಂಡಗೋಡ ತಾಲೂಕಾ ಕಾರ್ಯದರ್ಶಿಯಾಗಿ ಗಣೇಶ ಗಬ್ಬೂರ್, ಖಜಾಂಚಿಯಾಗಿ ಮಹಾಂತೇಶ ತಿರುಕಣ್ಣನವರ್ ಹಾಗೂ ರಾಜ್ಯ ಪರಿಷತ್ ಸದಸ್ಯರಾಗಿ ರಾಘವೇಂದ್ರ ಗಿರಡ್ಡಿ ಆಯ್ಕೆಯಾಗಿದ್ದಾರೆ.

Read More

“ಈಗ ಕಾಲ ಬದಲಾಗಿದೆ, ಉಗ್ರರು ತಮ್ಮ ಮನೆಗಳಲ್ಲಿಯೂ ಭಯಭೀತರಾಗಿದ್ದಾರೆ” : ವಿಪಕ್ಷಗಳ ವಿರುದ್ಧ ‘ಪ್ರಧಾನಿ ಮೋದಿ’ ವಾಗ್ದಾಳಿ

ನವದೆಹಲಿ : ಭಯೋತ್ಪಾದನೆ ವಿಷಯದ ಬಗ್ಗೆ ಪ್ರತಿಪಕ್ಷಗಳನ್ನ ಗುರಿಯಾಗಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ, ಈಗ ಭಯೋತ್ಪಾದಕರು ತಮ್ಮ ಮನೆಗಳಲ್ಲಿಯೂ ಅಸುರಕ್ಷಿತರಾಗಿದ್ದಾರೆ, ಆದರೆ ಹಿಂದಿನ ಸರ್ಕಾರಗಳಲ್ಲಿ ಭಯೋತ್ಪಾದನೆಯಿಂದಾಗಿ ಜನರು ಅಸುರಕ್ಷಿತ ಭಾವನೆ ಹೊಂದಿದ್ದರು ಎಂದು ಹೇಳಿದರು. ಮಾಧ್ಯಮ ಸಂಸ್ಥೆಯ ಕಾರ್ಯಕ್ರಮಕ್ಕೆ ಆಗಮಿಸಿದ ಪ್ರಧಾನಿ ಮೋದಿ, ಹಿಂದಿನ ಸರ್ಕಾರಗಳು ವೋಟ್ ಬ್ಯಾಂಕ್ ಮತ್ತು ತುಷ್ಟೀಕರಣದ ರಾಜಕೀಯವನ್ನು ಮಾಡಿದ್ದವು, ಆದರೆ ಈಗ ನಾವು ಸರ್ಕಾರದ ಮೇಲೆ ಜನರ ನಂಬಿಕೆಯನ್ನು ಪುನಃಸ್ಥಾಪಿಸುತ್ತಿದ್ದೇವೆ ಎಂದು ಹೇಳಿದರು. ‘ಈಗ ಭಯೋತ್ಪಾದಕರು ತಮ್ಮ ಮನೆಗಳಲ್ಲಿಯೂ ಭಯಭೀತರಾಗಿದ್ದಾರೆ’ಈ ಸಂದರ್ಭದಲ್ಲಿ…

Read More

ಅಕ್ರಮ ಆಸ್ತಿ ಗಳಿಕೆ ಪ್ರಕರಣ – ಸಚಿವ ಜಮೀರ್‌ ಅಹ್ಮದ್‌ಗೆ ಲೋಕಾಯುಕ್ತ ನೋಟಿಸ್‌

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಚಿವ ಜಮೀರ್‌ ಅಹ್ಮದ್‌ಗೆ ಲೋಕಾಯುಕ್ತ ನೋಟಿಸ್‌ ನೀಡಿದೆ. ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ. ಡಿಸೆಂಬರ್ 3 ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ಡಿವೈಎಸ್‌ಪಿ ನೋಟಿಸ್‌ ನೀಡಿದ್ದಾರೆ.

Read More

ಮಂತ್ರಾಲಯದಲ್ಲಿ ತುಂಗಾರತಿ ಸಂಭ್ರಮ – ರಾಯರ ಮಠದಲ್ಲಿ ಕಳೆಕಟ್ಟಿದ ಬೆಳಕಿನ ಹಬ್ಬ

ರಾಯಚೂರು: ಕಲಿಯುಗ ಕಾಮಧೇನು ಗುರು ರಾಘವೇಂದ್ರ ಸ್ವಾಮಿಗಳ ಸನ್ನಿಧಿ ಮಂತ್ರಾಲಯದಲ್ಲಿ ಕಾರ್ತಿಕ ಶುದ್ಧ ಪೌರ್ಣಮಿ ಹಿನ್ನೆಲೆ ಪುಣ್ಯನದಿ ತುಂಗಭದ್ರೆಗೆ ಆರತಿ ಬೆಳಗುವ ಮೂಲಕ ತುಂಗಾರತಿ ಕಾರ್ಯಕ್ರಮ ಹಾಗೂ ಮಠದ ಪ್ರಾಕಾರದಲ್ಲಿ ಲಕ್ಷದೀಪೋತ್ಸವ ಶುಕ್ರವಾರ ರಾತ್ರಿ ಅದ್ದೂರಿಯಾಗಿ ನಡೆಯಿತು.  ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. ತುಂಗಾರತಿ ಕಾರ್ಯಕ್ರಮದ ನಿಮಿತ್ತ ವಿಶೇಷ ಪೂಜೆ ಸಲ್ಲಿಸಿ ಶ್ರೀಗಳು ನೆರೆದಿದ್ದ ಭಕ್ತರಿಗೆ ಆಶೀರ್ವಚನ ನೀಡಿದರು. ಇದಕ್ಕೂ ಮೊದಲು ಉತ್ಸವ ಮೂರ್ತಿ ಪ್ರಹ್ಲಾದರಾಜರನ್ನು ಶ್ರೀಮಠದಿಂದ ತುಂಗಭದ್ರಾ ನದಿ ತೀರಕ್ಕೆ ಮೆರವಣಿಗೆ…

Read More