Headlines

ಅಷ್ಟೊತ್ತಿನಲ್ಲಿ ಯುವತಿ ನಿರ್ಜನ ಪ್ರದೇಶಕ್ಕೆ ಹೋಗಬಾರದಿತ್ತು ಎಂದ ಗೃಹ ಸಚಿವರ ಹೇಳಿಕೆ ಹಿಂಪಡೆಯುವಂತೆ ಕೆಲ ಸಂಘಟನೆಗಳ ಒತ್ತಾಯ

ಬೆಂಗಳೂರು: ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಲ್ಲಿ ಎಂಬಿಎ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಹೇಯ ಕೃತ್ಯವೆಸಗಿದ ಕಾಮುಕರನ್ನು ಬಂಧಿಸಿ ನಡುರಸ್ತೆಯಲ್ಲಿ ಗುಂಡಿಕ್ಕಿ ಕೊಲ್ಲಬೇಕು. ಸಂತ್ರಸ್ತೆಗೆ ನ್ಯಾಯ ಕೊಡಿಸಬೇಕು ಎಂದು ಸಾವಿರಾರು ವಿದ್ಯಾರ್ಥಿಗಳು ರಾಜ್ಯಾದ್ಯಂತ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಈ ಪಕರಣ ಸಂಬಂಧ ಗೃಹ ಸಚಿವ ಆರಗ ಜ್ಞಾನೇಂದ್ರ, ‘ಸಂತ್ರಸ್ತ ಯುವತಿ ನಿರ್ಜನ‌ಪ್ರದೇಶಕ್ಕೆ ಹೋಗಬಾರದಿತ್ತು…’ ಎನ್ನುವ ಮೂಲಕ ಮಹಿಳೆಯರು ಸೇರಿದಂತೆ ವಿವಿಧ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಬೆಂಗಳೂರಿನ ಶೇಷಾದ್ರಿ ರಸ್ತೆಯಲ್ಲಿರುವ ಬಂಧೀಖಾನೆ‌ಇಲಾಖೆಯ‌ಹಿರಿಯ…

Read More

ವಿದ್ಯುತ್ ವ್ಯತ್ಯಯ

ಮುಂಡಗೋಡ : 110/11 ಕೆ.ವಿ. ವಿದ್ಯುತ್ ಉಪಕೇಂದ್ರದಲ್ಲಿ ನಿರ್ವಹಣೆ ಕೈಗೊಳ್ಳುವುದರಿಂದ ನಾಳೆ ಶುಕ್ರವಾರ ದಿ.27ರಂದು ಬೆಳಿಗ್ಗೆ 10ಗಂಟೆಯಿಂದ ಸಂಜೆ 6ಗಂಟೆವರೆಗೆ ಮುಂಡಗೋಡ ಪಟ್ಟಣ, ಚವಡಳ್ಳಿ, ಟಿಬೆಟಿಕಾಲೋನಿ, ಗುಂಜಾವತಿ, ಕಾತೂರ, ಬಾಚಣಕಿ, ಅಗಡಿ, ಸನವಳ್ಳಿ, ಹುನಗುಂದ, ನಂದಿಕಟ್ಟಾ ಹಾಗೂ ಇಂದೂರ ಪಂಚಾಯತಿಯ ಸುತ್ತಮುತ್ತಲ ಗ್ರಾಮಗಳ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗುವುದರಿಂದ ಸಾರ್ವಜನಿಕರು ಸಹಕರಿಸಬೇಕು ಎಂದು ಹೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ ತಿಳಿಸಿದ್ದಾರೆ.

Read More

ಕೇಂದ್ರ ಹಣಕಾಸು ಸಚಿವರನ್ನು ಭೇಟಿ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ : 15ನೇ ಹಣಕಾಸು ಆಯೋಗದ ಅನುದಾನ ಹಂಚಿಕೆ ಹೆಚ್ಚಿಸಲು ಮನವಿ

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಕೇಂದ್ರ ಸರ್ಕಾರದಿಂದ ಜಿ.ಎಸ್.ಟಿ. ಪರಿಹಾರವನ್ನು ಇನ್ನೂ ಮೂರು ವರ್ಷಗಳಿಗೆ ಮುಂದುವರೆಸುವಂತೆ ಹಾಗೂ 15ನೇ ಹಣಕಾಸು ಆಯೋಗದ ಅನುದಾನ ಹಂಚಿಕೆ ಹೆಚ್ಚಿಸುವಂತೆ ಮನವಿ ಮಾಡಿದರು. ಕೋವಿಡ್ ಸಾಂಕ್ರಾಮಿಕ ದಿಂದಾಗಿ ರಾಜ್ಯಗಳ ತೆರಿಗೆ ಸಂಗ್ರಹ ಕಡಿಮೆಯಾಗಿದ್ದು, ಸಾಮಾನ್ಯ ಸ್ಥಿತಿಗೆ ಬರಲು ಕೆಲವು ವರ್ಷಗಳೇ ಬೇಕಾಗಬಹುದು. ಕಳೆದ ವರ್ಷ ಜಿ ಎಸ್ ಟಿ ಪರಿಹಾರ ಸಾಲ ಒದಗಿಸಲಾಗಿತ್ತು. ಈ ವರ್ಷವೂ ಈ…

Read More

ಕಾಂಗ್ರೆಸ್ ನವರು ನನ್ನನ್ನು ರೇಪ್ ಮಾಡಲು ಯತ್ನಿಸುತ್ತಿದ್ದಾರೆ; ನಿರ್ಜನ ಪ್ರದೇಶಕ್ಕೆ ಯುವತಿ ಹೋಗಬಾರದಾಗಿತ್ತು: ಆರಗ ಜ್ಞಾನೇಂದ್ರ

ಬೆಂಗಳೂರು:ಮೈಸೂರು ಚಾಮುಂಡೇಶ್ವರಿ ಬೆಟ್ಟದ ತಪ್ಪಲಿನಲ್ಲಿ ಎರಡು ದಿನಗಳ ಹಿಂದೆ ಕಾಲೇಜು ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಈಗ ರಾಜಕೀಯ ತಿರುವು ಪಡೆದುಕೊಳ್ಳುತ್ತಿದೆ. ಆಡಳಿತ ಮತ್ತು ಪ್ರತಿಪಕ್ಷ ನಾಯಕರು ಇದರ ಬಗ್ಗೆ ರಾಜಕೀಯವಾಗಿ ಪರಸ್ಪರ ಕೆಸರೆರಚಾಟಕ್ಕೆ ಮುಂದಾಗಿದ್ದಾರೆ. ಮೈಸೂರಿನಲ್ಲಿ ಇಂತಹ ಪ್ರಕರಣಗಳು ಹೆಚ್ಚಾಗುತ್ತಿವೆ, ಗೃಹ ಸಚಿವರು, ಸರ್ಕಾರ ಮತ್ತು ಪೊಲೀಸ್ ಇಲಾಖೆ ಸಂಪೂರ್ಣ ವಿಫಲವಾಗಿದೆ ಎಂದು ಕಾಂಗ್ರೆಸ್ ನವರು ಈಗಾಗಲೇ ಆರೋಪಿಸಿದ್ದಾರೆ. ಈ ಬಗ್ಗೆ ಇಂದು ಮಾಧ್ಯಮದವರು ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಪ್ರತಿಕ್ರಿಯೆ…

Read More

ಗೃಹ ಸಚಿವರ ‘ರೇಪ್’ ಹೇಳಿಕೆ; ಆರಗ ಜ್ಞಾನೇಂದ್ರ ವಿರುದ್ಧ ಡಿ.ಕೆ.ಶಿವಕುಮಾರ್ ಆಕ್ರೋಶ

ಬೆಂಗಳೂರು: ಮೈಸೂರು ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ನೀಡಿರುವ ಬೇಜವಾಬ್ದಾರಿ ಹೇಳಿಕೆಗೆ ಕಿಡಿ ಕಾರಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ನ ಯಾರ್ಯಾರಿಂದ ರೇಪ್ ಆಗಿದೆ ಅವರನ್ನು ಬಂಧಿಸಲಿ ಎಂದು ಹೇಳಿದ್ದಾರೆ. ರೇಪ್ ನಡೆದಿದ್ದು ಅಲ್ಲಿ, ಕಾಂಗ್ರೆಸ್ ನವರು ನನ್ನ ಮೇಲೆ ರೇಪ್ ಮಾಡುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದ ಗೃಹ ಸಚಿವರ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿರುವ ಡಿ.ಕೆ.ಶಿವಕುಮಾರ್, ಗೃಹ ಸಚಿವರಾಗಿ ಇಂತಹ ಬೇಜವಾಬ್ದಾರಿ ಹೇಳಿಕೆ ನೀಡುತ್ತಿರುವುದು ಖಂಡನೀಯ. ‘ರೇಪ್’ ಎಂಬ ಪದವನ್ನು ಗೃಹ…

Read More

ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಲ್ಲಿ ಅನ್ಯಾಯ: ಆರೋಪ, ಮನವಿ ಅರ್ಪಣೆ

ಮುಂಡಗೋಡ : ಬಾಚಣಕಿ ಪಂಚಾಯತ ವ್ಯಾಪ್ತಿಯ ರೈತರಿಗೆ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಲ್ಲಿ ಅನ್ಯಾಯ ಆಗುತ್ತಿದೆ ಎಂದು ಆರೋಪಿಸಿ ಕರ್ನಾಟಕ ರೈತಸಂಘ ಹಾಗೂ ಹಸಿರು ಸೇನೆಯ ಸದಸ್ಯರು ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ನೇತೃತ್ವದಲ್ಲಿ ರೈತರು ತಹಶೀಲದಾರ ಶ್ರೀಧರ ಮುಂದಲಮನಿ ಅವರಿಗೆ ಇಂದು ಮನವಿ ಅರ್ಪಿಸಿದರು.

Read More

ಅಣಬೆಕೀಳಲು ಹೋದವನ ಮೇಲೆ ಕರಡಿ ದಾಳಿ

ಮುಂಡಗೋಡ : ಕಾಡಿನಲ್ಲಿ ಅಣಬೆ ಕೀಳಲು ಹೋದ ವ್ಯಕ್ತಿಯ ಮೇಲೆ ಕರಡಿಯೊಂದು ದಾಳಿ ಮಾಡಿದ ಘಟನೆ ಆಲಳ್ಳಿ ಗ್ರಾಮದಲ್ಲಿ ಇಂದು ನಡೆದಿದೆ. ಇಂದು ನಸುಕಿನ ಜಾವ ಆಲಳ್ಳಿ ಗ್ರಾಮದ ಧರ್ಮಣ್ಣ ಖಂಡೋಜಿ ಹಾಗೂ ಸಂಗಡಿಗರು ಸೇರಿ ಆಲಳ್ಳಿ ಅರಣ್ಯದಲ್ಲಿ ಅಣಬೆ ಕೀಳಲು ಹೋದಾಗ ಧರ್ಮಣ್ಣನ ಮೇಲೆ ಕರಡಿ ದಾಲಿ ಮಾಡಿದೆ ಎಂದು ಕಾತೂರ ಉಪವಲಯ ಅರಣ್ಯಾಧಿಕಾರಿ ನಾಗರಾಜ ಕಲಾಲ ತಿಳಿಸಿದ್ದಾರೆ. ಅರಣ್ಯದಂಚಿನಲ್ಲಿರುವ ಗೋವಿನಜೋಳ ಹೊಲಕ್ಕೆ ಹೋದ ಸಂದರ್ಭದಲ್ಲಿ ಮಂಗಗಳನ್ನು ಓಡಿಸಲು ಹೋದಾಗ ಕರಡಿ ದಾಳಿ ಮಾಡಿದೆ. ಕರಡಿಯ…

Read More

ಭೌತಿಕ ತರಗತಿ ಆರಂಭವಾದರೂ ಇನ್ನೂ ಕೈ ಸೇರದ ಪೂರ್ಣ ಪ್ರಮಾಣದ ಪಠ್ಯಪುಸ್ತಕ: ಸಂಕಷ್ಟದಲ್ಲಿ ವಿದ್ಯಾರ್ಥಿಗಳು

ಬೆಂಗಳೂರು: ಪಠ್ಯಪುಸ್ತಕಗಳನ್ನು ವಿತರಣೆಯಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವ ರಾಜ್ಯ ಸರ್ಕಾರವನ್ನು ಇತ್ತೀಚೆಗಷ್ಟೇ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿತ್ತು. ಇದರ ಬೆನ್ನಲ್ಲೇ. ಇನ್ನೂ 45.26 ರಷ್ಟು ಪಠ್ಯಪುಸ್ತಕಗಳು ವಿದ್ಯಾರ್ಥಿಗಳ ಕೈಸೇರಬೇಕಿದೆ ಎಂಬ ಮಾಹಿತಿ ಶಿಕ್ಷಣ ಇಲಾಖೆ ಅಂಕಿಅಂಶಗಳಿಂದ ತಿಳಿದುಬಂದಿದೆ.  ಪಠ್ಯಪುಸ್ತಕ ವಿತರಣೆ ಮಾಡದ ರಾಜ್ಯ ಸರ್ಕಾರದ ವಿರುದ್ಧ ಮಂಗಳವಾರವಷ್ಟೇ ಹೈಕೋರ್ಟ್ ಕಿಡಿಕಾರಿತ್ತು. ತರಗತಿಗಳು ಆರಂಭವಾಗುವುದಕ್ಕಿಂತ ಮುಂಚೆ ಪಠ್ಯ ಪುಸ್ತಕಗಳ ವ್ಯವಸ್ಥೆ ಮಾಡಿಕೊಳ್ಳಬೇಕಿತ್ತು. ಈಗಾಗಲೇ ರಾಜ್ಯದಲ್ಲಿ 9 ರಿಂದ 12ನೇ ವರೆಗೆ ತರಗತಿಗಳನ್ನು ಪ್ರಾರಂಭಿಸಲಾಗಿದೆ. ಪಠ್ಯ ಪುಸ್ತಕಗಳಿಲ್ಲದೆ ವಿದ್ಯಾರ್ಥಿಗಳು ಶಾಲೆಗೆ ಹೋಗುವ…

Read More

ಬಿಜೆಪಿಗೆ ಅತ್ಯಾಚಾರಿಗಳೆಂದರೆ ಹೆಚ್ಚು ಪ್ರೀತಿ! ಮೈಸೂರು ಗ್ಯಾಂಗ್ ರೇಪ್ ನಡೆದು 24 ಗಂಟೆ ಕಳೆದರೂ ಆರೋಪಿಗಳನ್ನು ಬಂಧಿಸಿಲ್ಲ: ಕಾಂಗ್ರೆಸ್ ಆರೋಪ

ಬೆಂಗಳೂರು: ಯುವತಿಯನ್ನು ಅತ್ಯಾಚಾರವೆಸಗಿದ ಮಾಜಿ ಸಚಿವರ ರಕ್ಷಣೆ ನಿಂತಂತೆ ಮೈಸೂರಿನ ಅತ್ಯಾಚಾರಿಗಳ ರಕ್ಷಣೆಯನ್ನೂ ಮಾಡುವಂತಿದೆ ಸರ್ಕಾರ ಎಂದು ಕಾಂಗ್ರೆಸ್ ಆರೋಪಿಸಿದೆ. ಈ ಬಗ್ಗೆ ಟ್ವೀಟ್ ಮೂಲಕ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ರಾಜ್ಯ ಕಾಂಗ್ರೆಸ್, ಮೈಸೂರಿನಂತಹ ನಗರದಲ್ಲಿ ಅತ್ಯಾಚಾರ ಪ್ರಕರಣ ನಡೆದು 24 ಗಂಟೆಗೂ ಅಧಿಕ ಸಮಯ ಕಳೆದಿದ್ದರೂ ಆರೋಪಿಗಳನ್ನು ಬಂಧಿಸಲಾಗದ್ದು ಆಡಳಿತದಲ್ಲಿ ಗೃಹ ಇಲಾಖೆಯ ಕಾರ್ಯಕ್ಷಮತೆ ಕುಸಿದಿರುವುದಕ್ಕೆ ಸಾಕ್ಷಿಯಾಗಿದೆ. ಇದುವರೆಗೂ ಗೃಹಸಚಿವರು, ಬಿಜೆಪಿಯ ಮಹಿಳಾ ನಾಯಕಿಯರು ಸಂತ್ರಸ್ತೆಯನ್ನು ಭೇಟಿಯಾಗದಿರುವುದು ಬಿಜೆಪಿಯ ನಿರ್ಲಕ್ಷ್ಯ ಧೋರಣೆಗೆ ನಿದರ್ಶನ ಎಂದು ಟೀಕಿಸಿದೆ. ಅತ್ಯಾಚಾರ…

Read More

ಮೈಸೂರು ಗ್ಯಾಂಗ್ ರೇಪ್ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ, ಆರೋಪಿಗಳ ಪತ್ತೆಗೆ ಪೊಲೀಸರ ತನಿಖೆ: ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು: ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ರೇಪ್ ಪ್ರಕರಣ ಸಂಬಂಧ ಈಗಾಗಲೇ ಎಫ್‌ಐಆರ್‌ ದಾಖಲಾಗಿದೆ, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು  ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಪೊಲೀಸರು ನಿರಂತರವಾಗಿ ಕೆಲಸ ಮಾಡುತ್ತಿದ್ದಾರೆ. ಈ ಪ್ರಕರಣವನ್ನು ತುಂಬಾ ಗಂಭೀರವಾಗಿ ಪರಿಗಣಿಸಲಾಗಿದೆ. ಇದುವರೆಗೆ ಆರೋಪಿಗಳ ಪತ್ತೆಯಾಗಿಲ್ಲ. ಇಂದು ಸಂಜೆ ಮೈಸೂರಿಗೆ ತೆರಳುತ್ತೇನೆ. ನಾಳೆ ಪೊಲೀಸ್ ಅಧಿಕಾರಿಗಳ ಜತೆ ಸಭೆ ನಡೆಸುತ್ತೇನೆ ಎಂದು ಹೇಳಿದರು. ಮೊನ್ನೆ ಮಂಗಳವಾರ ಸಾಯಂಕಾಲ 7.30-8 ಗಂಟೆ ಸುಮಾರಿಗೆ ಯುವತಿ ಮೇಲೆ…

Read More