ಕಾಬುಲ್​ನಿಂದ ಸುರಕ್ಷಿತವಾಗಿ ದೆಹಲಿ ತಲುಪಿದ 107 ಭಾರತೀಯರು; ಮುಂದುವರಿದ ತೆರವು ಕಾರ್ಯಾಚರಣೆ

ನವದೆಹಲಿ: ಭಾರತೀಯ ವಾಯುಪಡೆಯ ವಿಶೇಷ ವಿಮಾನವೊಂದು ಇಂದು ಬೆಳಿಗ್ಗೆ 107 ಭಾರತೀಯರೂ ಸೇರಿದಂತೆ 168 ಜನರನ್ನು ಅಫ್ಘಾನಿಸ್ತಾನದಿಂದ ಹೊತ್ತುತಂದಿದ್ದು, ದೆಹಲಿ ಬಳಿಯ ಹಿಂದೋನ್​ ಏರ್​ ಬೇಸ್​ನಲ್ಲಿ ಇಳಿದಿದೆ. ಹೀಗೆ ಆಗಮಿಸಿರುವ ಯಾತ್ರಿಗಳಿಗೆ ಕರೊನಾದ ಆರ್​ಟಿಪಿಸಿಆರ್​ ಪರೀಕ್ಷೆ ನಡೆಸಲಾಗುತ್ತಿದೆ ಎಂದು ಎಎನ್​​ಐ ಸುದ್ದಿ ಸಂಸ್ಥೆ ವರದಿ ಮಾಡಿದೆ. ಇದರೊಂದಿಗೆ ಏರ್​ ಇಂಡಿಯ, ಇಂಡಿಗೋ ಮತ್ತು ವಿಸ್ತಾರ ಏರ್​ಲೈನ್​ಗಳ ಮೂರು ಇತರ ವಿಮಾನಗಳೂ ಕಾಬುಲ್​ನಿಂದ ತೆರವುಗೊಳಿಸಲ್ಪಟ್ಟ ಭಾರತೀಯರನ್ನು ತಜಿಕಿಸ್ತಾನದ ರಾಜಧಾನಿ ದುಶಾನ್ಬೆ ಮತ್ತು ಖತಾರ್​​ನ ದೋಹಾದಿಂದ ಹೊತ್ತುತಂದಿದೆ.

Read More

ರಕ್ಷಾ ಬಂಧನ್: ಮರಗಳಿಗೆ ರಾಖಿ ಕಟ್ಟಿದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್!

ಪಾಟ್ನಾ: ರಕ್ಷಾ ಬಂಧನ್ ಆಚರಣೆ ಅಂಗವಾಗಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮರಗಳಿಗೆ ರಾಖಿ ಕಟ್ಟಿದ್ದಾರೆ. ಪರಿಸರ ಸಂರಕ್ಷಣೆ ಕುರಿತು ಜನರಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ಜೆಡಿಯು ಪಕ್ಷದ ಮುಖ್ಯಸ್ಥರು ಆಗಿರುವ ನಿತೀಶ್ ಕುಮಾರ್ ಮರಗಳಿಗೆ ರಾಖಿ ಕಟ್ಟಿದ್ದಾರೆ. ಬಿಹಾರದಲ್ಲಿ ಪರಿಸರ ಸಂರಕ್ಷಣೆ ನಿಟ್ಟಿನಲ್ಲಿ 2021ರಿಂದಲೂ ರಕ್ಷಾ ಬಂಧನ್ ಹಬ್ಬವನ್ನು ‘ವೃಕ್ಷ ರಕ್ಷಾ ದಿವಸ್ ‘ ಆಗಿ ಎನ್ ಡಿಎ ನೇತೃತ್ವದ ಬಿಹಾರ ಸರ್ಕಾರ ಆಚರಿಸಿಕೊಂಡು ಬಂದಿದ್ದು, ಜನರು ಸಸಿಗಳನ್ನು ನೆಟ್ಟು, ಅವುಗಳನ್ನು ಕಾಪಾಡುವ ಮೂಲಕ ಪರಿಸರವನ್ನು ಸಂರಕ್ಷಿಸಬೇಕೆಂದು…

Read More

ಜಲಕ್ರೀಡೆಗಿಲ್ಲ ಅನುಮತಿ-ನೆಲಕಚ್ಚಿದ ಪ್ರವಾಸೋದ್ಯಮ

ಕಾರವಾರ : ಕೋವಿಡ್ ಆರ್ಭಟಕ್ಕೆ ದಾಂಡೇಲಿ- ಜೋಯಿಡಾದ ಪ್ರವಾಸೋದ್ಯಮ ಚಟುವಟಿಕೆ ಕೂಡ ಯಾತನೆ ಅನುಭವಿಸಿತ್ತು. ದಾಂಡೇಲಿ-ಜೋಯಿಡಾದಲ್ಲಿ ಪ್ರವಾಸೋದ್ಯ ಮವನ್ನೆ ನಂಬಿ ಬದುಕು ಕಟ್ಟಿಕೊಂಡವರ ಬದುಕು ಮೂರಾ ಬಟ್ಟೆಯಾಗಿದೆ. ಪ್ರವಾಸೋದ್ಯಮಿಗಳು ಸಾಲಸೋಲ ಮಾಡಿದ್ದು, ಇದೀಗ ಸಾಲದ ಕಂತು ಪಾವತಿಸಲಾಗದೇ ತಲೆಮೇಲೆ ಕೈಹೊತ್ತು ಕೂತಿದ್ದಾರೆ. ಇನ್ನು ಪ್ರವಾಸಿ ಏಜೆಂಟರು, ಪ್ರವಾಸೋದ್ಯಮ ಚಟುವಟಿಕೆಯಲ್ಲಿ ಕೂಲಿ ಕಾರ್ಮಿಕರಾಗಿ ಜೀವನ ನಡೆಸುವವರಿಗೆ ಒಂದೊಂದು ದಿನ ಮುನ್ನಡೆಸುವುದು ಕಷ್ಟವಾಗಿದೆ. ಕೊರೊನಾ ಎರಡನೇ ಅಲೆ ಕಡಿಮೆಯಾಗುತ್ತಿದ್ದಂತೆ ಪ್ರವಾಸೋದ್ಯಮ ಚಟುವಟಿಕೆ ಮತ್ತೆ ಗರಿಗೆದರಲು ಪ್ರಾರಂಭವಾಯ್ತು. ಪ್ರವಾಸೋದ್ಯಮಕ್ಕೆ ಮೂಲ ಆಸರೆಯಾದ ರ್ಯಾಪ್ಟಿಂಗ್‌,…

Read More

85 ಭಾರತೀಯರನ್ನು ಹೊತ್ತ ಎಐಎಫ್ ವಿಮಾನ ಕಾಬೂಲ್ ನಿಂದ ಪ್ರಯಾಣ

ಕಾಬೂಲ್: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ನ್ನು ತಾಲಿಬಾನ್ ವಶಕ್ಕೆ ಪಡೆದ ನಂತರ ಅಲ್ಲಿರುವ ಭಾರತೀಯರನ್ನು ಸ್ಥಳಾಂತರಿಸಲು ಪ್ರಯತ್ನಿಸಲಾಗುತ್ತಿದ್ದು, 85 ಭಾರತೀಯರನ್ನು ಹೊತ್ತ ಭಾರತೀಯ ವಾಯುಪಡೆಯ ಸಿ-130 ಜೆ ವಿಮಾನ ಶನಿವಾರ ಬೆಳಗ್ಗೆ ಕಾಬೂಲ್ ನಿಂದ ಪ್ರಯಾಣ ಆರಂಭಿಸಿದೆ. ಕಾಬೂಲ್ ನಿಂದ ಟೇಕಾಪ್ ಆದ ವಿಮಾನ ಇಂದನ ತುಂಬಿಸಿಕೊಳ್ಳುವ ಸಲುವಾಗಿ ತಜಕಿಸ್ತಾನ್ ನಲ್ಲಿ ಇಳಿದಿದೆ. ಕಾಬೂಲ್ ನಿಂದ ಭಾರತೀಯ ನಾಗರಿಕರನ್ನು ಸ್ಥಳಾಂತರಿಸಲು ಭಾರತೀಯ ಅಧಿಕಾರಿಗಳು ನೆರವಾಗುತ್ತಿದ್ದಾರೆ ಎಂದು ಮೂಲಗಳು ಹೇಳಿರುವುದಾಗಿ ಎಎನ್ ಐ ಸುದ್ದಿಸಂಸ್ಥೆ ವರದಿ ಮಾಡಿದೆ. ಸರ್ಕಾರ ಸಂಘಟಿತ…

Read More

ವಿಶ್ವವಿಖ್ಯಾತ ಹಂಪಿಗೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಭೇಟಿ

ಹೊಸಪೇಟೆ : ವಿಶ್ವವಿಖ್ಯಾತ ಹಂಪಿಗೆ ಇಂದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಭೇಟಿ ನೀಡಿದ್ದಾರೆ. ಕುಟುಂಬ ಸಮೇತರಾಗಿ ಆಗಮಿಸಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಹಂಪಿಯ ಶ್ರೀ ವಿರೂಪಾಕ್ಷ ದೇಗುಲ, ಲೋಟಸ್ ಮಹಲ್ ವಿಜಯ ವಿಠ್ಠಲ ದೇಗುಲ ವೀಕ್ಷಿಸಿದ್ದಾರೆ. ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ವಿರೂಪಾಕ್ಷೇಶ್ವರ, ಪಾರ್ವತಿ, ಭುವನೇಶ್ವರ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆಯ ಹಂಪಿಯ ವಿದ್ಯಾರಣ್ಯ ಪೀಠದ ವಿದ್ಯಾರಣ್ಯ ಭಾರತಿ ಶ್ರೀಗಳು ಉಪಸ್ಥಿತಿರಿದ್ದರು. ವೆಂಕಯ್ಯ ನಾಯ್ಡು ಅವರ ಭೇಟಿ ಹಿನ್ನೆಲೆಯಲ್ಲಿ ಹಂಪಿಯಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ….

Read More

ಜಿಂದಾಲ್ ನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ 10 ದಿನಗಳ ಪ್ರಕೃತಿ ಚಿಕಿತ್ಸೆ!

ಬೆಂಗಳೂರು: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ನಗರದ ಜಿಂದಾಲ್‌ ಪ್ರಕೃತಿ ಚಿಕಿತ್ಸಾ ಕೇಂದ್ರಕ್ಕೆ ಇಂದು ದಾಖಲಾಗಲಿದ್ದಾರೆ. ಹತ್ತು ದಿನಗಳ ಕಾಲ ಅವರು ಅಲ್ಲಿ ಚಿಕಿತ್ಸೆ ಪಡೆಯಲಿದ್ದಾರೆ. ‘ಇಂದು ಪ್ರಕೃತಿ ಚಿಕಿತ್ಸಾ ಕೇಂದ್ರಕ್ಕೆ ದಾಖಲಾಗುವ ಸಿದ್ದರಾಮಯ್ಯ ಅವರು, ಆಗಸ್ಟ್‌ 31ರ ಸಂಜೆ ಅಲ್ಲಿಂದ ವಾಪಸಾಗಲಿದ್ದಾರೆ. ಹತ್ತು ದಿನಗಳ ಕಾಲ ಪ್ರಕೃತಿ ಚಿಕಿತ್ಸೆಗೆ ಹೋಗುತ್ತಿದ್ದೇನೆ. ನೆಲಮಂಗಲ ಬಳಿಯ ಜಿಂದಾಲ್ ಪ್ರಕೃತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ. ಹತ್ತು ದಿನಗಳ ಕಾಲ ನಾನು ಮನೆಯಲ್ಲಿ ಇರುವುದಿಲ್ಲ ಎಂದು ಮಾಜಿ ಸಿಎಂ…

Read More

ಇನ್ನೆರಡು ದಿನಗಳಲ್ಲಿ ಶಾಲೆ ಆರಂಭ : ಭಯಪಡದೇ ಬನ್ನಿ ಮಕ್ಕಳೇ ಎಂದ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು : ರಾಜ್ಯದಲ್ಲಿ ಆಗಸ್ಟ್ 23ರಿಂದ 9, 10, 11 ಮತ್ತು 12ನೇ ತರಗತಿಗಳ ಶಾಲೆಗಳು ಆರಂಭಗೊಳ್ಳಲಿವೆ. ಈಗಾಗಲೇ ಶಾಲೆಗಳ ಆರಂಭಕ್ಕಾಗಿ ಶಿಕ್ಷಣ ಇಲಾಖೆ ಮಾರ್ಗಸೂಚಿ ಕೂಡ ಹೊರಡಿಸಿದ್ದು, ಆ ಮಾರ್ಗಸೂಚಿ ಕ್ರಮ ಅನುಸರಿಸಿ, ವಿದ್ಯಾರ್ಥಿಗಳನ್ನು ಸ್ವಾಗತಿಸಲು ಸಜ್ಜಾಗಿವೆ. ಈ ಹಿನ್ನಲೆಯಲ್ಲಿ ಶಾಲೆಗಳ ಆರಂಭಕ್ಕೆ ಎಲ್ಲಾ ಸಿದ್ಧತೆ, ಮುಂಜಾಗ್ರತಾ ಕ್ರಮ ಕೈಗೊಂಡಿದ್ದು, ಮಕ್ಕಳು ಭಯಪಡೇ ಬನ್ನಿ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರೀತಿಯಿಂದ ಆಹ್ವಾನಿಸಿದ್ದಾರೆ. ಈ ಕುರಿತಂತೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಪೋಷಕರು, ಶಾಲಾ ಆಡಳಿತ ಮಂಡಳಗಳು…

Read More

ವಿನಯ ಕುಲಕರ್ಣಿ ಬಿಡುಗಡೆ: ರಾಖಿ ಕಟ್ಟಿ ಸ್ವಾಗತಿಸಿದ ಲಕ್ಷ್ಮಿ ಹೆಬ್ಬಾಳಕರ

ಬೆಳಗಾವಿ: ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ವಿನಯ ಕುಲಕರ್ಣಿ ಅವರು ಇಲ್ಲಿನ ಹಿಂಡಲಗಾ ಕಾರಾಗೃಹದಿಂದ ಜಾಮೀನಿನ ಮೇಲೆ ಬಿಡುಗಡೆಯಾದರು. ಅವರಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ರಾಖಿ ಕಟ್ಟಿ, ಹಣೆಗೆ ತಿಲಕವಿಟ್ಟು ಬರಮಾಡಿಕೊಂಡರು. ಬೆಂಬಲಿಗರು ಹೂಮಾಲೆಗಳನ್ನು ಹಾಕಿ ಸ್ವಾಗತಿಸಿಕೊಂಡರು. ಆವರಣದಲ್ಲಿ ಅಭಿಮಾನಿಗಳು ಮತ್ತು ಬೆಂಬಲಿಗರ ಜಯಘೋಷಗಳು ಮುಗಿಲು ಮುಟ್ಟಿವೆ. ಯೋಗೀಶಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ ಅವರನ್ನು ಸಿಬಿಐ ಬಂಧಿಸಿತ್ತು. ರೈತ ಕುಟುಂಬದಲ್ಲಿ ಜನಿಸಿ, ವಿದ್ಯಾರ್ಥಿ ನಾಯಕನಾಗಿ ಈ ಮಟ್ಟಕ್ಕೆ ಬಂದಿದ್ದೇನೆ. ನನ್ನ ಜನರಿಗಾಗಿ ಎಂಥದ್ದೇ ಹೋರಾಟಕ್ಕೆ ಸಿದ್ಧವಾಗಿದ್ದೇನೆ….

Read More

ಭಾರತದಲ್ಲಿ 12 ವರ್ಷ ಮೇಲ್ಪಟ್ಟ ಮಕ್ಕಳಿಗೆ ಕೊರೊನಾವೈರಸ್ ಲಸಿಕೆ

ನವದೆಹಲಿ : ಜಗತ್ತಿನಲ್ಲೇ ಮೊದಲ ಹಾಗೂ ಮತ್ತು ಭಾರತದಲ್ಲಿ ದೇಶೀಯವಾಗಿ ಅಭಿವೃದ್ಧಿಪಡಿಸಿದ ಡಿಎನ್‌ಎ ಆಧಾರಿತ ಕೊವಿಡ್-19 ಲಸಿಕೆಗೆ ಭಾರತದ ಡ್ರಗ್ಸ್ ಕಂಟ್ರೋಲರ್ ಜನರಲ್ ಅನುಮೋದನೆ ನೀಡಿದೆ. “ಜೈಡಸ್ ಕ್ಯಾಡಿಲಾ ಕಂಪನಿ ಉತ್ಪಾದಿಸುವ ಜೈಕೊವ್-ಡಿ ಲಸಿಕೆಯ ತುರ್ತು ಬಳಕೆಗೆ ಶುಕ್ರವಾರ ಅನುಮೋದನೆ ನೀಡಲಾಗಿದೆ. 12 ವರ್ಷ ಮೇಲ್ಪಟ್ಟ ಮಕ್ಕಳು ಮತ್ತು ವಯಸ್ಕರಿಗೆ ಈ ಲಸಿಕೆ ನೀಡುವುದಕ್ಕೆ ಅನುಮತಿಸಲಾಗಿದೆ,” ಎಂದು ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯ ತಿಳಿಸಿದೆ. ಜೈಡಸ್ ಕ್ಯಾಡಿಲಾ ಕಂಪನಿ 3 ಡೋಸ್ ಕೊವಿಡ್-19 ಲಸಿಕೆಗೆ ಅನುಮೋದನೆ ನೀಡುವುದಕ್ಕೆ…

Read More

ಇಡೀ ಆಫ್ಘನ್ ಗೆದ್ದ ತಾಲಿಬಾನ್​ಗೆ ಅದೊಂದು ಪ್ರಾಂತ್ಯ ಮಾತ್ರ ನಡುಕ ಹುಟ್ಟಿಸಿದೆ…..!

ನವದೆಹಲಿ : ಇಡೀ ಅಫ್ಘಾನಿಸ್ತಾನವೇ ತಾಲಿಬಾನಿಗಳ ವಶವಾಗಿಬಿಡ್ತು ಅಂತಾ ಹೇಳೋ ಹೊತ್ತಿಗೆ ರೆಡಿಯಾಗಿದೆ ಪ್ರತಿರೋಧ. ತಾಲಿಬಾನಿಗಳ ಅಟ್ಟ ಹಾಸಕ್ಕೆ ಮರೆಯಾಗಿದ್ದ ಸೈನಿಕರೆಲ್ಲರನ್ನೂ ಒಗ್ಗೂಡಿಸ್ತಿದ್ದಾರೆ ಹಾಲಿ ಉಪಾಧ್ಯಕ್ಷ ಅಮ್ರುಲ್ಲಾ ಸಲೇಹ್. ಅದರಲ್ಲೂ ತಾಲಿಬಾನಿಗಳ ಎದೆಯಲ್ಲಿ ಹೊಸ ನಡುಕ ತಂದಿದೆ ತಾಲಿಬಾನಿ ಹಿಡಿತಕ್ಕೆ ಸಿಗದ ಏಕೈಕ ಪ್ರಾಂತ್ಯ ಪಂಜ್​ಶಿರ್. ಇಲ್ಲಿನ ಅಜ್ಞಾತ ಸ್ಥಳದಿಂದಲೇ ಗುಡುಗಿದ್ದಾರೆ ಅಮ್ರುಲ್ಲಾ ಸಲೇಹ್,. 20 ವರ್ಷಗಳ ಬಳಿಕ ತಿರುಗಿಬಿದ್ದ ತಾಲಿಬಾನ್ ರಕ್ತಪಿಪಾಸುಗಳು, ಅಫ್ಘಾನಿಸ್ತಾನವನ್ನ ಕೈವಶ ಮಾಡಿಕೊಂಡಿದ್ದಾರೆ. ಯಾವಾಗ ಎರಡು ದಿನಗಳ ಹಿಂದೆ ಕಾಬೂಲ್ ತಾಲಿಬಾನಿಗಳ ತೆಕ್ಕೆಗೆ ಸೇರಿತೋ,…

Read More