ಸೈಬರ್ ಕ್ರೈಂ; 89 ಸಾವಿರ ಕಳೆದುಕೊಂಡ ಶಂಕರ ಬಿದರಿ
ಬೆಂಗಳೂರು : ಸೈಬರ್ ಕ್ರೈಂ ಜಾಲಕ್ಕೆ ಸಿಲುಕಿದ ನಿವೃತ್ತ ಪೊಲೀಸ್ ಮಹಾನಿರ್ದೇಶಕ ಶಂಕರ ಬಿದರಿ 89 ಸಾವಿರ ರೂ. ಕಳೆದುಕೊಂಡಿದ್ದಾರೆ. ಬೆಂಗಳೂರಿನ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನಿವೃತ್ತ ಐಪಿಎಸ್ ಅಧಿಕಾರಿ ಶಂಕರ ಬಿದರಿ ಬ್ಯಾಂಕ್ ಖಾತೆಗೆ ಕನ್ನ ಹಾಕಿರುವ ಕಳ್ಳರು 89 ಸಾವಿರ ರೂ. ದೋಚಿದ್ದಾರೆ. ಕರೆ ಮಾಡಿದ್ದ ವ್ಯಕ್ತಿಗೆ ಒಟಿಪಿ ಹೇಳಿದ್ದ ಶಂಕರ ಬಿದರಿ ಕೆಲವೇ ನಿಮಿಷಗಳಲ್ಲಿ ಹಣ ಕಳೆದುಕೊಂಡಿದ್ದಾರೆ. ಪಾನ್ ಕಾರ್ಡ್ ಮತ್ತು ಬ್ಯಾಂಕ್ ಖಾತೆ ಲಿಂಕ್ ಮಾಡಬೇಕು ಎಂದು ವ್ಯಕ್ತಿಯೊಬ್ಬರು…