ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಮತ್ತಷ್ಟು ಕಠಿಣ ರೂಲ್ಸ್ ಜಾರಿ : ಸಚಿವ ಡಾ. ಅಶ್ವತ್ಥ್ ನಾರಾಯಣ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಯಾರೂ ಭಯ ಪಡಬೇಕಾದ ವಾತಾವರಣ ಇಲ್ಲ ಎಂದು ಸಚಿವ ಅಶ್ವತ್ಥ್ ನಾರಾಯಣ ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೊನಾ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ರಾಜ್ಯ ಸರ್ಕಾರವು ಕಠಿಣ ರೂಲ್ಸ್ ತಂದು ಕೊರೊನಾ ನಿಯಂತ್ರಣ ಮಾಡುತ್ತಿದೆ. ಬಿಬಿಎಂಪಿ ಡೋರ್ ಟೂ ಡೋರ್ ಸರ್ವೆ ಮಾಡುತ್ತಿದೆ. ಮುಂದಿನ ದಿನಗಳಲ್ಲಿ ಲಸಿಕೆ ವಿತರಣೆ ಹೆಚ್ಚಳ ಮಾಡುತ್ತೇವೆ ಎಂದರು. ಇನ್ನು ರಾಜ್ಯದಲ್ಲಿ ವರಮಹಾಲಕ್ಷ್ಮೀ ಹಬ್ಬ ಇರುವ ಹಿನ್ನೆಲೆ ರಾಜ್ಯಾದ್ಯಂತ ಸಂಭ್ರಮ ಮನೆ…

Read More

ತೃಪ್ತಿವೈನ್ ಶಾಪನಲ್ಲಿ ಕಳ್ಳತನ

ಮುಂಡಗೋಡ : ಪಟ್ಟಣದ ತೃಪ್ತಿವೈನ್ ಶಾಪನಲ್ಲಿ ಕಳೆದ ರಾತ್ರಿ ಕಳ್ಳರು ಅಂಗಡಿಯ ಮೇಲ್ಛಾವಣಿ ಹಂಚು ತೆಗೆದು ನಗದು ಹಣ ಸೇರಿದಂತೆ ಮದ್ಯದ ಬಾಟಲಿಗಳನ್ನು ಕದ್ದೊಯ್ದಿದ್ದಾರೆ. ಅಂಗಡಿಯಲ್ಲಿ ಎಷ್ಟು ಹಣವಿತ್ತು? ಎಷ್ಟು ಮೌಲ್ಯದ ಬಾಟಲಿ ಕದ್ದೊಯ್ದಿದ್ದಾರೆ? ಇನ್ನಾವ ವಸ್ತುಗಳನ್ನು ಕಳ್ಳರು ಕದ್ದುಕೊಂಡು ಹೋಗಿದ್ದಾರೆ? ಎಂಬ ಬಗ್ಗೆ ಮಾಹಿತಿ ತಿಳಿದು ಬರಬೇಕಾಗಿದೆ.

Read More

ಅಫ್ಘಾನಿಸ್ತಾನದಲ್ಲಿ ಸಿಲುಕಿರುವ ಕನ್ನಡಿಗರನ್ನು ಕರೆತರಲು ನೋಡೆಲ್ ಅಧಿಕಾರಿ ನೇಮಕ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು : ತಾಲಿಬಾನ್ ಉಗ್ರರ ವಶದಲ್ಲಿರುವ ಅಫ್ಘಾನಿಸ್ಥಾನದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕರ್ನಾಟಕ ರಾಜ್ಯದ ನಾಗರೀಕರನ್ನು ತವರಿಗೆ ವಾಪಸ್ ಕರೆತರಲು ರಾಜ್ಯ ಸರ್ಕಾರ ವಿಶೇಷ ನೋಡಲ್ ಅಧಿಕಾರಿಯನ್ನು ನೇಮಕ ಮಾಡಿದೆ. ಈಗಾಗಲೇ ಕೇಂದ್ರ ಸರ್ಕಾರ ಆಫ್ಘಾನಿಸ್ತಾನದಲ್ಲಿರುವ ಭಾರತೀಯರನ್ನು ಕರೆತರಲು ಮತ್ತು ಅವರ ರಕ್ಷಣೆಗಾಗಿ ವಿದೇಶಾಂಗ ಸಚಿವಾಲಯದಿಂದ ಸಹಾಯವಾಣಿ (Helpline) ಹಾಗೂ ಇ-ಮೇಲ್ ಸೇವೆಯನ್ನು ಕೂಡ ಆರಂಭಿಸಲಾಗಿದೆ. ಇದರ ನಡುವೆ ಅಫ್ಘಾನಿಸ್ತಾನದಲ್ಲಿ ಸಿಲುಕಿರುವ ಕನ್ನಡಿಗರ ಬಗ್ಗೆ ಮಾಹಿತಿ ನೀಡಿ, ಅವರನ್ನು ಸುರಕ್ಷಿತವಾಗಿ ಕರೆಸಿಕೊಳ್ಳಲು ಕೇಂದ್ರ ಸರ್ಕಾರದ ಜೊತೆ ಸಮನ್ವಯತೆಗಾಗಿ ಐಪಿಎಸ್ ಅಧಿಕಾರಿ ಉಮೇಶ್…

Read More

ಶಾಲೆ ಆರಂಭಕ್ಕೆ ಸಿದ್ಧತೆ : ಸಚಿವ ನಾಗೇಶ್‌

ಬೆಂಗಳೂರು: ಪ್ರೌಢಶಾಲೆಯ 9 ಮತ್ತು 10ನೇ ತರಗತಿ ಭೌತಿಕ ತರಗತಿಗಳನ್ನು ಆ.23ರಿಂದ ಆರಂಭಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಬಿ.ಸಿ. ನಾಗೇಶ್‌ ಹೇಳಿದರು. ಶಾಲೆ ಪುನರಾರಂಭದ ಪೂರ್ವಸಿದ್ಧತೆ ಪರಿಶೀಲನೆಗೆ ಬೆಂಗಳೂರಿನಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರ ಕಚೇರಿಯಲ್ಲಿ ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು ವೀಡಿಯೊ ಕಾನ್ಫರೆನ್ಸ್‌ ಮೂಲಕ ಕ್ಷೇತ್ರ ಶಿಕ್ಷಣಾಧಿಕಾರಿಗಳ ಜತೆ ಸಭೆ ನಡೆಸಿದ ಅವರು, ಶಾಲೆ ಆವರಣದಲ್ಲಿ ಶುಚಿತ್ವ ಕಾಪಾಡುವುದು ಅತಿ ಮುಖ್ಯವಾಗಿದೆ. ಶೌಚಗೃಹ, ಶಾಲಾ ಆವರಣ, ಕೊಠಡಿಗಳು ಸಹಿತ…

Read More

ವನ್ಯ ಪ್ರಾಣಿಯಿಂದ ಬೆಳೆ ನಷ್ಟ : ಅರಣ್ಯ ಇಲಾಖೆಯ ನಿರ್ಲಕ್ಷ್ಯತೆಗೆ ರೈತರ ತೀವ್ರ ಆಕ್ರೋಶ

ಮುಂಡಗೋಡ : ತಾಲೂಕಾದ್ಯಂತ ವನ್ಯಪ್ರಾಣಿಗಳಿಂದ ಉಂಟಾಗುತ್ತಿರುವ ಬೆಳೆನಷ್ಟ ನಿಯಂತ್ರಿಸುವಲ್ಲಿ ಅರಣ್ಯ ಇಲಾಖೆಯು ನಿರ್ಲಕ್ಷಿಸುತ್ತಿರುವುದು ಖಂಡನಾರ್ಹ. ಅರಣ್ಯ ಇಲಾಖೆಯ ನಿರ್ಲಕ್ಷ್ಯತೆ ರೈತರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ತಕ್ಷಣ ಅರಣ್ಯ ಇಲಾಖೆಯು ಈ ದಿಶೆಯಲ್ಲಿ ಸಕ್ರಿಯವಾಗುವುದರೊಂದಿಗೆ ನಷ್ಟಕ್ಕೆ ಪರಿಹಾರವನ್ನು ಬಿಡುಗಡೆಗೊಳಿಸಬೇಕೆಂದು ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಆಗ್ರಹಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ತಾಲೂಕಾದ್ಯಂತ ಕಂದಾಯ ಮತ್ತು ಅರಣ್ಯ ಅತಿಕ್ರಮಣದಾರರ ಸಾಗುವಳಿ ಪ್ರದೇಶದ ಬೆಳೆಗಳು ವನ್ಯಪ್ರಾಣಿಗಳಿಂದ ನಷ್ಟವಾಗುತ್ತಿದ್ದರೂ ಅರಣ್ಯ ಇಲಾಖೆ ಮತ್ತು ಸರಕಾರದಿಂದ, ರಕ್ಷಣೆ ಮತ್ತು…

Read More

ಶಿರಸಿ: ಬಸ್ ತಂಗುದಾಣದಲ್ಲಿ ನವಜಾತ ಗಂಡು ಶಿಶು ಪತ್ತೆ

ಶಿರಸಿ : ತಾಲ್ಲೂಕಿನ ಗೌಡಳ್ಳಿ ಸಮೀಪದ ಖಾನ್ ನಗರದ ಬಸ್ ತಂಗುದಾಣದಲ್ಲಿ ನವಜಾತ ಗಂಡು ಶಿಶು ಬುಧವಾರ ನಸುಕಿನ ಜಾವ ಪತ್ತೆಯಾಗಿದೆ. ಕೂಗಿಲಕುಳಿ ಗ್ರಾಮದ ಮಹಿಳೆಯೊಬ್ಬರಿಗೆ ಈ ಮಗು ದೊರೆತಿದ್ದು ಅದನ್ನು ಅವರು ಶಿರಸಿಯ ಸಹಾಯ ಟ್ರಸ್ಟ್‌ಗೆ ಹಸ್ತಾಂತರಿಸಿದ್ದಾರೆ. ಟ್ರಸ್ಟ್ ಅಧ್ಯಕ್ಷ ಸತೀಶ ಶೆಟ್ಟಿ ಅನಾರೋಗ್ಯಕ್ಕೆ ತುತ್ತಾಗಿರುವ ಮಗುವನ್ನು ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿದ್ದಾರೆ. ಮಕ್ಕಳ ತುರ್ತು ನಿಗಾ ಘಟಕದಲ್ಲಿ (ಎನ್.ಐ.ಸಿ.ಯು.) ಚಿಕಿತ್ಸೆ ನೀಡಲಾಗುತ್ತಿದೆ. ‘ಕೂಲಿ ಕೆಲಸಕ್ಕೆ ಹೋಗುವಾಗ ತಂಗುದಾಣದಲ್ಲಿ ಮಗುವಿನ ಅಳು ಕೇಳಿಸಿತು. ಹತ್ತಿರ ತೆರಳಿ ನೋಡಿದಾಗ ಚೀಲವೊಂದರಲ್ಲಿ…

Read More

‘ಶೋಭಾ ಕರಂದ್ಲಾಜೆ ತಮ್ಮ ಹೇಳಿಕೆ ವಾಪಸ್ ಪಡೆದು, ರೈತರ ಕ್ಷಮೆ ಕೇಳಲಿ’

ಬೆಂಗಳೂರು : ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ತಮ್ಮ ಹೇಳಿಕೆಯನ್ನು ವಾಪಸ್​ ಪಡೆದು ರೈತರ ಕ್ಷಮೆ ಯಾಚಿಸಬೇಕೆಂದು ಪ್ರತಿಪಕ್ಷನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಈ ಸಂಬಂಧ ಟ್ವೀಟ್​ ಮಾಡಿರುವ ಅವರು, ಸರ್ಕಾರದ ಕರಾಳ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ಹೋರಾಟ ನಡೆಸುತ್ತಿರುವ ರೈತರನ್ನು ‘ದಲ್ಲಾಳಿಗಳು’, ‘ಮಧ್ಯವರ್ತಿಗಳು’ ಎಂದು ಅವಮಾನಿಸಿರುವ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ ಖಂಡನೀಯ. ಅವರು ತಕ್ಷಣ ತಮ್ಮ ಹೇಳಿಕೆಯನ್ನು ವಾಪಸ್​ ಪಡೆದು ರೈತರ ಕ್ಷಮೆ ಯಾಚಿಸಬೇಕು. ಶೋಭಾ ಕರಂದ್ಲಾಜೆ ಹೇಳಿಕೆ ಕೇಂದ್ರ ಬಿಜೆಪಿ ಸರ್ಕಾರದ ಅಧಿಕೃತ…

Read More

ದ್ವಿತೀಯ ಪಿಯು ಪರೀಕ್ಷೆಗೆ ಕ್ಷಣಗಣನೆ

ಬೆಂಗಳೂರು : ನಾಳೆಯಿಂದ ಸೆ.3ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಸಲು ಪದವಿಪೂರ್ವ ಪರೀಕ್ಷಾ ಮಂಡಳಿ ಸಿದ್ದತೆ ಮಾಡಿಕೊಂಡಿದೆ. ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಯನ್ನು ಸುಸೂತ್ರವಾಗಿ ನಡೆಸಲು ಎಲ್ಲ ಅಗತ್ಯ ಮುನ್ನೆಚ್ಚರಿಕೆಗಳನ್ನು ಕೂಡ ಈಗಾಗಲೇ ಕೈಗೊಳ್ಳಲಾಗಿದೆ. ದ್ವಿತೀಯ ಪಿಯುಸಿ ಪರೀಕ್ಷಾ ಮಂಡಳಿ ಇತ್ತೀಚೆಗೆ ಪ್ರಕಟಿಸಿದ ಫಲಿತಾಂಶ ತೃಪ್ತಿಯಾಗದೆ ಪರೀಕ್ಷೆ ಬರೆಯಲು ಇಚ್ಛಿಸಿದ ಹಾಗೂ ಖಾಸಗಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪರೀಕ್ಷೆ ನಡೆಸಲಾಗುತ್ತಿದೆ. ಪರೀಕ್ಷೆ ಸಂದರ್ಭದಲ್ಲಿ ಕೋವಿಡ್ ಮಾರ್ಗ ಸೂಚಿ ಪಾಲನೆ ಮಾಡುವುದು ಕಡ್ಡಾಂವಾಗಿದೆ. 5546 ಕಾಲೇಜುಗಳ ಸುಮಾರು 18,414…

Read More

“ಆನಂದ್‍ಸಿಂಗ್ ಬಗ್ಗೆ ನನಗೇನೂ ಗೊತ್ತಿಲ್ಲ, ನೀವುಂಟು ಅವರುಂಟು”

ಬೆಂಗಳೂರು : ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಅವರು ಪ್ರಮಾಣ ವಚನ ಸ್ವೀಕರಿಸಿದ್ದರೂ ಸಚಿವರಾಗಿ ಇನ್ನು ಕಚೇರಿಯಲ್ಲಿ ಕೆಲಸ ಆರಂಭಿಸದಿರುವ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ನನಗೇನೂ ಗೊತ್ತಿಲ್ಲ, ನೀವುಂಟು ಅವರುಂಟು ಎಂದು ಸೂಚ್ಯವಾಗಿ ಹೇಳಿದರು. ಖಾತೆ ಬದಲಾವಣೆಗೆ ಪಟ್ಟು ಹಿಡಿದಿದ್ದ ಸಚಿವ ಆನಂದ್ ಸಿಂಗ್ ಬಂಡಾಯದ ಹಾದಿ ಹಿಡಿದಿದ್ದರು. ಮುಖ್ಯಮಂತ್ರಿಯವರೊಂದಿಗಿನ ಸಂಧಾನದ ಬಳಿಕ ಬಂಡಾಯ ಶಮನವಾಗಿದೆ ಎಂದು ಹೇಳಲಾಗಿದೆ. ಆದರೆ, ಇದುವರೆಗೂ ಸಿಂಗ್ ತಮಗೆ ಹಂಚಿಕೆಯಾದ ಖಾತೆಯಲ್ಲಿ ಕಾರ್ಯ ನಿರ್ವಹಿಸಲು ವಿಧಾನಸೌಧ ಕೊಠಡಿಗೆ ಪ್ರವೇಶವನ್ನೇ…

Read More

ಸಂಸತ್ತಿನಲ್ಲಿ ಪರಿಚಯಕ್ಕೂ ಅವಕಾಶ ನೀಡದ ಕಾಂಗ್ರೆಸ್ : ಸಚಿವೆ ಶೋಭಾ ಆಕ್ರೋಶ

ಹಾಸನ : ಹೊಸದಾಗಿ ಆಯ್ಕೆಯಾದ ಸಚಿವರನ್ನು ಸಂಸತ್ತಿಗೆ ಪರಿಚಯ ಮಾಡುವುದು ವಾಡಿಕೆ. ಇದನ್ನು ವಿಪಕ್ಷಗಳು ಸ್ವಾಗತಿಸುತ್ತವೆ. ಆದರೆ ಈ ಬಾರಿ ಕಾಂಗ್ರೆಸ್ ಅದಕ್ಕೆ ಅವಕಾಶವ ನೀಡಲಿಲ್ಲ ಎಂದು ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಶೋಭಾ ಕರಂದ್ಲಾಜೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯ ದೊಡ್ಡಹಳ್ಳಿಯಲ್ಲಿ ಹಮ್ಮಿಕೊಂಡಿದ್ದ ಜನಾಶೀರ್ವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಸತ್‍ನಲ್ಲಿ ಸಂಪ್ರದಾಯದಂತೆ ನೂತನ ಸಚಿವರನ್ನು ಪರಿಚಯ ಮಾಡುವ ಪ್ರಕ್ರಿಯೆ ನಡೆಸಲು ವಿರೋಧ ಪಕ್ಷ ಕಾಂಗ್ರೆಸ್ ಅವಕಾಶ ನೀಡಲಿಲ್ಲ. ಇತಿಹಾಸದಲ್ಲಿಯೇ ಮೊದಲ ಬಾರಿ…

Read More