ಈ ವಾರಾಂತ್ಯದಿಂದ ಉಡುಪಿ ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ಜಾರಿ: ಕೋಟ ಶ್ರೀನಿವಾಸ್ ಪೂಜಾರಿ
ಉಡುಪಿ : ಈ ವಾರಾಂತ್ಯದಿಂದ ಉಡುಪಿ ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ಜಾರಿ ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ನಿರ್ಧಾರ ಪುನರ್ ಪರಿಶೀಲನೆ ಮಾಡಬೇಕು ಎಂದು ಮುಖ್ಯಮಂತ್ರಿಗಳು ಮತ್ತು ಆರೋಗ್ಯ ಸಚಿವರಿಗೆ ಕೋಟ ಶ್ರೀನಿವಾಸ್ ಪೂಜಾರಿ ವಿನಂತಿಸಿದ್ದಾರೆ. ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಕುಂದಾಪುರದಲ್ಲಿ ಮಾಧ್ಯಮಗಳು ಮಾತನಾಡಿದರು. ಕೊರೊನಾ ಪಾಸಿಟಿವ್ ರೇಟ್ ಗಮನಿಸಿ ವೀಕೆಂಡ್ ಕರ್ಫ್ಯೂ ವಿಧಿಸಲಾಗಿದೆ. ಉನ್ನತ ಮಟ್ಟದಲ್ಲಿ ಈ ಬಗ್ಗೆ ಚರ್ಚೆ ಮಾಡಿ ಪರಿಹಾರ ಕಂಡುಕೊಳ್ಳುತ್ತೇವೆ ಜನಸಾಮಾನ್ಯರಿಗೆ ಇದರಿಂದ ಸಮಸ್ಯೆಯಾಗುತ್ತದೆ…