ಸರ್ಕಾರಿ ನೌಕರರ ‘ಸಾರ್ವತ್ರಿಕ ವರ್ಗಾವಣೆ’ಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್
ಬೆಂಗಳೂರು : ಕೊರೊನಾ ಕಾಲದಿಂದ ನೆನೆಗುದಿಗೆ ಬಿದ್ದಿದ್ದಂತ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗೆ, ಮುಹೂರ್ತ ಫಿಕ್ಸ್ ಆಗಿದೆ. ದಿನಾಂಕ 22-07-2021ರೊಳಗೆ 2021-22ನೇ ಸಾಲಿಗೆ ಗ್ರೂಪ್-ಬಿ ಮತ್ತು ಗ್ರೂಪ್-ಸಿ ವರ್ಗದ ಅಧಿಕಾರಿ, ನೌಕರ ಸಾರ್ವತ್ರಿಕ ವರ್ಗಾವಣೆ ಮುಕ್ತಾಯಗೊಳಿಸುವಂತೆ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ತೇಜಾವತಿ ಎನ್ ನಡವಳಿ ಹೊರಡಿಸಿದ್ದು, ಸರ್ಕಾರಿ ನೌಕರರ ವರ್ಗಾವಣೆ ಕುರಿತಂತೆ ವಿಸ್ತೃತವಾದ ಮಾರ್ಗಸೂಚಿಗಳನ್ನು ನೀಡಲಾಗಿದೆ. ಈ ಮಾರ್ಗಸೂಚಿಗಳ ಪ್ರಕಾರ ಸರ್ಕಾರಿ ನೌಕರರ ವರ್ಗಾವಣೆಗಳನ್ನು…
ಶನಿವಾರ ದಿ.10ರಂದು ಹೆಬ್ಬಾರ್ ರೇಶನ್ ಕಿಟ್ ವಿತರಣೆ
ಮುಂಡಗೋಡ : ಶನಿವಾರ ದಿ.10ರಂದು ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಮ ಹೆಬ್ಬಾರ ಅವರು ತಾಲೂಕಿನ ಗುಂಜಾವತಿ, ಬಾಚಣಕಿ, ನ್ಯಾಸರ್ಗಿ, ಸಾಲಗಾಂವ, ಚಿಗಳ್ಳಿ, ಚವಡಳ್ಳಿ, ನಾಗನೂರ, ಕಾತೂರ, ಓಣಿಕೇರಿ, ಪಾಳಾ, ಕೋಡಂಬಿ, ಮಳಗಿ, ಬೆಡಸಗಾಂವ ಗ್ರಾಮದಲ್ಲಿ ಹೆಬ್ಬಾರ್ ರೇಶನ್ ಕಿಟ್ ವಿತರಿಸಲಿದ್ದಾರೆ. ನಂತರ ಮುಂಡಗೋಡದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ವಿದ್ಯಾರ್ಥಿಗಳಿಗೆ ಸಚಿವರು, ಟ್ಯಾಬ್ ವಿತರಿಸಲಿದ್ದಾರೆ.
ಪಾಳಾ ನೆಮ್ಮದಿ ಕೇಂದ್ರದಲ್ಲಿ ಆಧಾರ್ ತಿದ್ದುಪಡಿ ಕೇಂದ್ರ ಆರಂಭ
ಮುಂಡಗೋಡ : ಆಧಾರ್ ಸಂಖ್ಯೆಗೆ ಮೊಬೈಲ್ ಸಂಖ್ಯೆ ಜೋಡಣೆಗೆ ರೈತರು, ಕಾರ್ಮಿಕರಿಗೆ ಆಗುತ್ತಿದ್ದ ಸಮಸ್ಯೆಯನ್ನು ಅರಿತು ಪಾಳಾ ಗ್ರಾಮದ ನೆಮ್ಮದಿ ಕೇಂದ್ರದಲ್ಲಿ ಆಧಾರ್ ತಿದ್ದುಪಡಿ ಕೇಂದ್ರ ಪುನರ್ ಆರಂಭಿಸಲಾಗಿದೆ. ಆಧಾರ್ ಕಾರ್ಡಗೆ ಮೊಬೈಲ್ ಸಂಖ್ಯೆ ಜೋಡಣೆಗೆ ತಾಲೂಕಿನ ಜನರ ಪರದಾಡುತ್ತಿರುವ ಕುರಿತು ಪತ್ರಿಕೆಯಲ್ಲಿ ವರದಿ ಪ್ರಕಟಗೊಂಡಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಮ ಹೆಬ್ಬಾರ ಅವರು ತಹಶೀಲದಾರ ಶ್ರೀಧರ ಮುಂದಲಮನಿ ಅವರಿಗೆ ಸಮಸ್ಯೆ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರು. ತಹಶೀಲದಾರ ಶ್ರೀಧರ ಮುಂದಲಮನಿ ಅವರು…
ಮೋದಿ ಸಚಿವ ಸಂಪುಟ : ರಾಜ್ಯದ ನಾಲ್ವರಿಗೂ ಖಾತೆ ಹಂಚಿಕೆ
ನವದೆಹಲಿ: ಪುನರ್‌ರಚನೆಯಾದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟದಲ್ಲಿ ರಾಜ್ಯ ಸಚಿವರಾಗಿ ಪದಗ್ರಹಣ ಮಾಡಿದ್ದ ರಾಜ್ಯದ ನಾಲ್ವರಿಗೂ ಖಾತೆ ಹಂಚಿಕೆ ಮಾಡಲಾಗಿದೆ. ಶೋಭಾ ಕರಂದ್ಲಾಜೆ ಅವರಿಗೆ ಕೃಷಿ ಮತ್ತು ರೈತರ ಕಲ್ಯಾಣ ಖಾತೆ, ಎ.ನಾರಾಯಣಸ್ವಾಮಿ ಅವರಿಗೆ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ, ರಾಜೀವ್ ಚಂದ್ರಶೇಖರ್ ಅವರಿಗೆ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಹಾಗೂ ಭಗವಂತ ಖೂಬಾ ಅವರಿಗೆ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ನೀಡಲಾಗಿದೆ. ಬುಧವಾರ ಸಂಜೆ ರಾಷ್ಟ್ರಪತಿ ಭವನದಲ್ಲಿ ನಡೆದ ನೂತನ ಸಚಿವರ ಪ್ರಮಾಣವಚನ ಸ್ವೀಕಾರ…
ಮುಂಡಗೋಡಿನಲ್ಲಿ ಡಿಕೆಶಿಗೆ ಹೂವಿನ ಮಳೆ..!
ಮುಂಡಗೋಡ: ಶಿರಸಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಹಮ್ಮಿಕೊಂಡಿದ್ದ ಸೈಕಲ್ ಜಾಥಾ ಪ್ರತಿಭಟನೆಗೆ ಆಗಮಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮುಂಡಗೋಡ ಪಟ್ಟಣಕ್ಕೆ ಭೇಟಿ ನೀಡಿದರು. ಶಿರಸಿಯಿಂದ ಹುಬ್ಬಳ್ಳಿಗೆ ತೆರಳುವ ವೇಳೆ ಮುಂಡಗೋಡ ಪಟ್ಟಣದಲ್ಲೂ ಕೆಲಹೊತ್ತು ನಿಂತು ಕಾರ್ಯಕರ್ತರನ್ನು ಭೇಟಿ ಮಾಡಿದರು. ಡಿಕೆಶಿ ಬರುತ್ತಿದ್ದಾರೆ ಎಂಬ ಮಾಹಿತಿ ತಿಳಿದು ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ನೂರಾರು ಸಂಖ್ಯೆಯಲ್ಲಿ ಕಾಂಗ್ರೆಸ್ ಯುವ ಕಾರ್ಯಕರ್ತರು ಜಮಾವಣೆ ಆಗಿದ್ದರು. ಡಿ.ಕೆ.ಶಿವಕುಮಾರ್ ಬರುತ್ತಿದ್ದಂತೆ ಘೋಷಣೆ ಕೂಗಿ ಹೂವಿನ ಮಳೆ ಸುರಿಸಿದರು. ಹಾರ ಹಾಕಿ…
ಶಿರಸಿಯಲ್ಲಿ ತೈಲ ಬೆಲೆ ಏರಿಕೆ ಖಂಡಿಸಿ ಡಿಕೆಶಿ ನೇತೃತ್ವದಲ್ಲಿ ಸೈಕಲ್ ಜಾಥಾ
ಶಿರಸಿ: ನಗರದಲ್ಲಿ ಇಂದು ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಕೇಂದ್ರ ಸರ್ಕಾರದ ವಿರುದ್ಧ, ತೈಲ ಬೆಲೆ ಏರಿಕೆ ಖಂಡಿಸಿ ಸೈಕಲ್ ಜಾಥಾ ನಡೆಯಿತು. ಕೋವಿಡ್ ನಿಯಮ ಹಿನ್ನೆಲೆಯಲ್ಲಿ ಡಿ.ಕೆ ಶಿವಕುಮಾರ್ ಸೈಕಲ್ ಜಾಥಾಗೆ ಉತ್ತರ ಕನ್ನಡ ಜಿಲ್ಲಾಡಳಿತ ಅನುಮತಿ ನೀಡಿರಲಿಲ್ಲ. ಆದರೂ ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತ ಪಡಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ಆರ್. ವಿ.ದೇಶಪಾಂಡೆ, ಮುಖಂಡರಾದ ಪ್ರಶಾಂತ ದೇಶಪಾಂಡೆ, ರವೀಂದ್ರ ನಾಯ್ಕ, ಕೃಷ್ಣ…