ಶಿಕ್ಷಕ ಮಂಜುನಾಥ್ ನೀಲಮ್ಮನವರ್ ಅವರಿಗೆ ಶ್ರೀ ಸ್ವಾಮಿ ವಿವೇಕಾನಂದ ರಾಷ್ಟ್ರೀಯ ಪ್ರಶಸ್ತಿ

ಮುಂಡಗೋಡ : ತಾಲೂಕಿನ ನಂದಿಕಟ್ಟಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪದವೀಧರ ಶಾಲಾ ಶಿಕ್ಷಕರಾದ ಮಂಜುನಾಥ ನೀಲಮ್ಮನವರ್ ಅವರು ಶಿಕ್ಷಣ ಕ್ಷೇತ್ರದಲ್ಲಿ ಸ್ಮರಣೀಯ ಸೇವೆ ಸಲ್ಲಿಸಿದ ಹಿನ್ನೆಲೆಯಲ್ಲಿ ರವಿವಾರ ಡಾ.ವಿ.ಬಿ.ಹಿರೇಮಠ ಮಹಾ ವೇದಿಕೆ,ಡಾ.ವಿ.ಬಿ.ಹಿರೇಮಠ ಮೆಮೋರಿಯಲ್ ಪ್ರತಿಷ್ಠಾನ(ರಿ) ಗದಗ ಹಾಗೂ ಅಶ್ವಿನಿ ಪ್ರಕಾಶನ ಗದಗ ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ಸ್ವಾಮಿ ವಿವೇಕಾನಂದ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.   ರವಿವಾರ ಗದಗದ ಶ್ರೀ ರಾಮ ಬಂಜಾರ ಭವನದಲ್ಲಿ ಶಿಕ್ಷಕ ಮಂಜುನಾಥ ನೀಲಮ್ಮನವರ್ ಅವರಿಗೆ ಈ ಪ್ರಶಸ್ತಿ ನೀಡಲಾಗಿದೆ.ಶಿಕ್ಷಕ ಮಂಜುನಾಥ…

Read More

ಬ್ರಾಹ್ಮಣ ಸಂಪ್ರದಾಯದಂತೆ ನೆರವೇರಿದ ಗುರುಪ್ರಸಾದ್ ಅಂತ್ಯಕ್ರಿಯೆ

ಬೆಂಗಳೂರು : ಮಠ, ಎದ್ದೇಳು ಮಂಜುನಾಥ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್ (Guruprasad) ಇಂದು (ನ.3) ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿದೆ.  ವಿಲ್ಸನ್ ಗಾರ್ಡನ್ ಚಿತಾಗಾರದಲ್ಲಿ ಕುಟುಂಬಸ್ಥರಿಂದ ಗುರುಪ್ರಸಾದ್ ಅವರ ಅಂತ್ಯಕ್ರಿಯೆ ನೆರವೇರಿಸಲಾಯಿತು. ಈ ವೇಳೆ, ಯೋಗರಾಜ್ ಭಟ್, ದುನಿಯಾ ವಿಜಯ್, ಡಾಲಿ, ಸತೀಶ್ ನೀನಾಸಂ, ತಬಲಾ ನಾಣಿ ಸೇರಿದಂತೆ ಅನೇಕರು ಭಾಗಿಯಾಗಿದ್ದರು.‌ ಅಂದಹಾಗೆ, 1972ರಲ್ಲಿ ಕನಕಪುರದಲ್ಲಿ ಜನಿಸಿದ ಗುರುಪ್ರಸಾದ್ ರಾಮಚಂದ್ರ ಶರ್ಮಾ 2006 ರಲ್ಲಿ ತೆರೆಕಂಡ ‘ಮಠ’ ಚಿತ್ರದ ಮೂಲಕ ನಿರ್ದೇಶಕನಾಗಿ ಕನ್ನಡ ಚಿತ್ರರಂಗದಲ್ಲಿ ಸಿನಿಪಯಣ ಆರಂಭಿಸಿದರು….

Read More

ಸಚಿವ ಜಮೀರ್ ಅಹ್ಮದ್ ಖಾನ್ ರನ್ನು ಕೂಡಲೇ ರಾಜ್ಯದಿಂದ ‘ಗಡಿಪಾರು’ ಮಾಡಿ : ಬಿವೈ ವಿಜಯೇಂದ್ರ ಆಗ್ರಹ!

ಚಿತ್ರದುರ್ಗ : ವಕ್ಫ್ ವಿವಾದಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ರೈತರಿಗೆ ನೀಡಿದ ನೋಟಿಸ್ ಗಳನ್ನು ಹಿಂಪಡೆಯಿರಿ ಎಂದು ಖಡಕ್ ಆಗಿ ಸೂಚನೆ ನೀಡಿದ್ದಾರೆ. ಇದೀಗ ಬಿಜೆಪಿಯ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಇಷ್ಟಕ್ಕೆಲ್ಲ ಮೂಲ ಕಾರಣಿಕರ್ತರಾದ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ರಾಜ್ಯದಿಂದ ಗಡಿಪಾರು ಮಾಡಿದರೆ ಒಳ್ಳೆಯದಾಗುತ್ತೆ ಎಂದು ಆಗ್ರಹಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಬಿ ವೈ ವಿಜಯೇಂದ್ರ ಅವರು, ಜಮೀರ್ ಅಹ್ಮದ್ ಸಂವಿಧಾನದ ಬಗ್ಗೆ ಮಾತಾಡುತ್ತಿದ್ದಾರೆ. ರಾಜ್ಯಾದ್ಯಂತ ಪ್ರವಾಸ ಮಾಡಿ ಅಧಿಕಾರಿಗಳ ಮೇಲೆ…

Read More

ರಾಜ್ಯದಲ್ಲಿ ಶೇ.90 ರಷ್ಟು ಮುಸ್ಲಿಂರೇ ‘ವಕ್ಫ್‌’ ಬೋರ್ಡ್‌ ಆಸ್ತಿ ಒತ್ತುವರಿ ಮಾಡಿದ್ದಾರೆ : ಸಚಿವ ಜಮೀರ್ ಅಹ್ಮದ್

ವಿಜಯಪುರ : ವಕ್ಫ್ ವಿವಾದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರು ನಿನ್ನೆ ವಕ್ಫ್ ಮಂಡಳಿ ಸಭೆ ನಡೆಸಿ ಸಭೆಯಲ್ಲಿ ಇದುವರೆಗೂ ರೈತರಿಗೆ ನೀಡಿದ್ದ ನೋಟಿಸ್ ಗಳನ್ನು ಕೂಡಲೇ ಹಿಂಪಡೆಯಿರಿ ಎಂದು ಖಡಕ್ ಸೂಚನೆ ನೀಡಿದ್ದಾರೆ. ಇದರ ಬೆನ್ನಲ್ಲೇ ಸಚಿವ ಜಮೀರ್ ಅಹ್ಮದ್ ಖಾನ್ ಅವರು ರಾಜ್ಯದಲ್ಲಿ ಶೇಕಡ 90ರಷ್ಟು ಮುಸ್ಲಿಂರೆ ವಕ್ಫ್‌ ಬೋರ್ಡ್‌ ಆಸ್ತಿ ಒತ್ತುವರಿ ಮಾಡಿದ್ದಾರೆ ಎಂದು ತಿಳಿಸಿದರು. ವಿಜಯಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಜಮೀರ್ ಅಹ್ಮದ್ ಖಾನ್ ಅವರು, ರೈತರಿಗೆ ನೀಡಿರುವ ನೋಟಿಸ್ ವಾಪಸ್…

Read More

ದಾಂಡೇಲಿಯ ಸಿಂಥೇರಿ ರಾಕ್ಸ್ ಎಂಬ ನೈಸರ್ಗಿಕ ಅದ್ಭುತ..!

@ ರಾಜಶೇಖರ ನಾಯ್ಕಸಿಂಥೇರಿ ರಾಕ್ಸ್ ಉತ್ತರ ಕನ್ನಡ ಜಿಲ್ಲೆಯಲ್ಲಿ ನೆಲೆಗೊಂಡಿರುವ ಭವ್ಯವಾದ ನೈಸರ್ಗಿಕ ಅದ್ಭುತವಾಗಿದೆ.  ಸಿಂಥೆರಿ ರಾಕ್ಸ್‌ ಬಗ್ಗೆ ನೀವು ಕೇಳಿದ್ದೀರಾ? ಇದು ಉತ್ತರ ಕರ್ನಾಟಕದಲ್ಲಿರುವ ಒಂದು ಪ್ರವಾಸಿ ತಾಣವಾಗಿದೆ. ದಾಂಡೇಲಿ ಅಭಯಾರಣಕ್ಕೆ ಹೋಗಿರುವವರು ಈ ರಾಕ್‌ನ್ನು ಖಂಡಿತಾ ನೋಡಿರ್ತೀರಾ..! ಇದು ಕಾಳಿ ನದಿಯ ಉಪನದಿಯಾದ ಕನೆರಿ ನದಿಯ ದಡದಲ್ಲಿದೆ. ಈ ಬಂಡೆಯ ಮೇಲಿನಿಂದ ಬೀಳುವ ನೀರು ಕಾಳಿ ನದಿಗೆ ಸೇರುತ್ತದೆ.ಸಿಂಥೇರಿ ರಾಕ್ಸ್ ರಚನೆ :ಸಿಂಥೇರಿ ರಾಕ್ಸ್ ರಚನೆಯು ಲಕ್ಷಾಂತರ ವರ್ಷಗಳ ಹಿಂದಿನದು. ಈ ಬಂಡೆಗಳು ಜ್ವಾಲಾಮುಖಿ…

Read More

ಚಿಗಳ್ಳಿ : ಹೋರಿ ಹಬ್ಬದಲ್ಲಿ ಹೋರಿ ತಿವಿದು ಯುವಕನ ಸಾವು

ಮುಂಡಗೋಡ : ತಾಲೂಕಿನ ಚಿಗಳ್ಳಿ ಗ್ರಾಮದಲ್ಲಿ ಹೋರಿ ಹಬ್ಬ ನೋಡಲು ಹೋದ ಯುವಕನಿಗೆ ಹೋರಿಯೊಂದು ತಿವಿದ ಪರಿಣಾಮವಾಗಿ ಯುವಕ ಮೃತಪಟ್ಟ ಘಟನೆ ಶನಿವಾರ ಸಂಭವಿಸಿದೆ.  ಪರಮೇಶ ಹರಿಜನ(21) ಮೃತಪಟ್ಟ ಯುವಕನಾಗಿದ್ದಾನೆ.ದೀಪಾವಳಿ ಹಬ್ಬದ ಅಂಗವಾಗಿ ತಾಲೂಕಿನ ಚಿಗಳ್ಳಿ ಗ್ರಾಮದ ಶ್ರೀ ಕಲ್ಮೇಶ್ವರ ಮಠದ ಬಳಿ ಹೋರಿ ಹಬ್ಬ ಶನಿವಾರ ಏರ್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ದುರ್ಘಟನೆ ನಡೆದಿದೆ.

Read More

69ನೇ ಕನ್ನಡ ರಾಜ್ಯೋತ್ಸವ : `ಧ್ವಜಾರೋಹಣ’ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: 69ನೇ ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾಯಿ ಭುವನೇಶ್ವರಿಗೆ ಪುಷ್ಪ ನಮನ ಸಲ್ಲಿಸಿ, ರಾಷ್ಟ್ರ ಧ್ವಜ ಹಾಗೂ ಕನ್ನಡ ಧ್ವಜಾರೋಹಣ ನೆರವೇರಿಸಿದರು. ಬಳಿಕ ವಿವಿಧ ಕನ್ನಡ ನಾಡಿನ ಸಂಸ್ಕೃತಿ ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಯಿತು.

Read More

ಮೈಸೂರು ರಾಜ್ಯ ʻಕರ್ನಾಟಕʼವಾಗಿದ್ದು ಹೇಗೆ? – ನಾಮಕರಣದ ಕಥೆ ನಿಮಗೆ ಗೊತ್ತೇ?

ಪ್ರತಿವರ್ಷ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸುವುದು ಮತ್ತು ಯುವ ಪೀಳಿಗೆಗೆ ಕನ್ನಡ ನಾಡಿನ ಇತಿಹಾಸ, ಸಂಸ್ಕೃತ, ಕಲೆ, ಭಾಷೆ ಬಗ್ಗೆ ಅರಿವು ಮೂಡಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಅದರಂತೆ ಕರ್ನಾಟಕದ ಇತಿಹಾಸ ತಿಳಿಯುವುದೂ ಅಷ್ಟೇ ಮುಖ್ಯವಾಗಿದೆ.ರಾಜ್ಯ ಉದಯಿಸಿ 17 ವರ್ಷಗಳವರೆಗೂ ʻಮೈಸೂರುʼ ಎಂಬ ಹೆಸರೇ ಇತ್ತು. ಬಳಿಕ ಮೈಸೂರು ರಾಜ್ಯಕ್ಕೆ 1973ರ ನವೆಂಬರ್ 1ರಂದು ʻಕರ್ನಾಟಕ’ ಎಂದು ನಾಮಕರಣ ಮಾಡಲಾಯಿತು. ʻಮೈಸೂರು’ ‘ಬದಲಾಗಿ ʻಕರ್ನಾಟಕʼ ಎಂದು ಮರುನಾಮಕರಣ ಮಾಡಿದ್ದೇಕೆ? ರಾಜ್ಯದ ಮೂಲ ಹೆಸರು…

Read More

‘ಶಕ್ತಿ ಯೋಜನೆ’ ಪರಿಷ್ಕರಣೆ ಹೇಳಿಕೆ : ಡಿಸಿಎಂ ಡಿಕೆ ಶಿವಕುಮಾರ್ ಗೆ ವೇದಿಕೆಯಲ್ಲೇ ತರಾಟೆಗೆ ತೆಗೆದುಕೊಂಡ ಖರ್ಗೆ

ಬೆಂಗಳೂರು: ರಾಜ್ಯ ಸಾರಿಗೆ ಸಂಸ್ಥೆ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ‘ಶಕ್ತಿ’ ಯೋಜನೆಯನ್ನು ಪರಿಶೀಲಿಸುತ್ತೇವೆ ಎಂದು ಹೇಳಿದ್ದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಗುರುವಾರ ತರಾಟೆಗೆ ತೆಗೆದುಕೊಂಡರು.  ಆರ್ಥಿಕವಾಗಿ ಸದೃಢವಾಗಿರುವವರು, ಐಟಿಬಿಟಿ ಸಂಸ್ಥೆಯವರು, ಎಂಎನ್ ಸಿ ಕಂಪನಿಗಳ ಸಿಬ್ಬಂದಿ ಸೇರಿದಂತೆ ಅನೇಕ ಮಹಿಳೆಯರು ತಮಗೆ ಬಸ್ ಗಳಲ್ಲಿ ಉಚಿತ ಪ್ರಯಾಣದ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ. ಈ ಬಗ್ಗೆ ಪರಿಶೀಲಿಸುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದರು. ಡಿಕೆ…

Read More

‘ಬಿಜೆಪಿ, ಜೆಡಿಎಸ್’ನಲ್ಲಿ ಭವಿಷ್ಯವಿಲ್ಲವೆಂದು ಆ ಪಕ್ಷಗಳ ಮುಖಂಡರು, ಕಾರ್ಯಕರ್ತರು ಕಾಂಗ್ರೆಸ್ ಸೇರುತ್ತಿದ್ದಾರೆ: ಡಿಸಿಎಂ ಡಿಕೆಶಿ

ರಾಮನಗರ: “ಬಿಜೆಪಿ ಹಾಗೂ ಜೆಡಿಎಸ್ ಪಕ್ಷದಲ್ಲಿ ಭವಿಷ್ಯವಿಲ್ಲ ಎಂಬ ಕಾರಣಕ್ಕೆ ಆ ಪಕ್ಷದ ಮುಖಂಡರು, ಕಾರ್ಯಕರ್ತರು ಗುಂಪು ಗುಂಪಾಗಿ ಕಾಂಗ್ರೆಸ್ ಸೇರುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ಚನ್ನಪಟ್ಟಣದ ಜೆಡಿಎಸ್ ಮತ್ತು ಬಿಜೆಪಿ ಮುಖಂಡರು, ಕಾರ್ಯಕರ್ತರು ರಾಮನಗರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ಪಕ್ಷಕ್ಕೆ ಸೇರಿಸಿಕೊಂಡ ನಂತರ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು. “ಕುಮಾರಸ್ವಾಮಿ ತನ್ನ ಸ್ಥಾನವನ್ನೇ ಉಳಿಸಿಕೊಳ್ಳುವುದು ಕಷ್ಟವಾಗಿದೆ. ಬಿಜೆಪಿ ನಾಯಕರೇ ಕುಮಾರಸ್ವಾಮಿ ಅವರಿಗೆ ಉತ್ತರ ನೀಡುತ್ತಾರೆ. ಅವರ ಪಕ್ಷ ಗಟ್ಟಿಯಾಗಿ…

Read More